ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅನುದಾನಿತ ಶಾಲೆಗಳಿಗೆ ತಾರತಮ್ಯ: ರುಪ್ಸ ಖಂಡನೆ

Published 20 ಡಿಸೆಂಬರ್ 2023, 16:21 IST
Last Updated 20 ಡಿಸೆಂಬರ್ 2023, 16:21 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ನೆಪ ನೀಡಿ ನೂರಾರು ಅನುದಾನಿತ ಕನ್ನಡ ಶಾಲೆಗಳನ್ನು ಮುಚ್ಚಿಸಲಾಗುತ್ತಿದೆ ಎಂದು ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸಂಘ (ರುಪ್ಸ) ಆರೋಪಿಸಿದೆ. 

ಅನುದಾನಿತ ಶಿಕ್ಷಣ ಸಂಸ್ಥೆಗಳು ನಡೆಸುತ್ತಿರುವ ಶಾಲೆಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ದಶಕದಿಂದ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿಲ್ಲ. ಶಿಕ್ಷಕರ ಕೊರತೆಯಿಂದಾಗಿ ಪಾಠಗಳು ನಡೆಯದೆ ಬೇರೆ ಶಾಲೆಗಳತ್ತ ವಿದ್ಯಾರ್ಥಿಗಳು ಮುಖ ಮಾಡಿದ್ದಾರೆ. ಹಾಗಾಗಿ, ಶಿಕ್ಷಕರ ಸಂಖ್ಯೆ ಕಡಿಮೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ರುಪ್ಸ ಅಧ್ಯಕ್ಷ ಲೋಕೇಶ್‌ ತಾಳಿಕಟ್ಟೆ ವಿವರಿಸಿದ್ದಾರೆ.

ಕನಿಷ್ಠ 70 ವಿದ್ಯಾರ್ಥಿಗಳು ಇದ್ದರೆ ಮಾತ್ರ ಅನುದಾನಿತ ಶಾಲೆಗಳ ಮಾನ್ಯತೆ ನೀಡಲಾಗುತ್ತದೆ. ಕಡಿಮೆಯಾದ ಶಾಲೆಗಳ ಮಾನ್ಯತೆ ರದ್ದು ಮಾಡಲಾಗುತ್ತಿದೆ. ಅದೇ ನೀತಿ ಸರ್ಕಾರಿ ಶಾಲೆಗಳಿಗೆ ಇಲ್ಲ. ತರಗತಿವಾರು ಮಕ್ಕಳ ಸಂಖ್ಯೆ ಕಡಿಮೆ ಇದೆ ಎಂಬ ನೆಪ ನೀಡಿ ನಾಲ್ಕು ತಿಂಗಳಿನಿಂದ ಶಿಕ್ಷಕರ ವೇತನವನ್ನೂ ನೀಡಿಲ್ಲ. ಸಮವಸ್ತ್ರ, ಪುಸ್ತಕ ಮತ್ತಿತರ ಸೌಲಭ್ಯಗಳಲ್ಲೂ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ದೂರಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT