ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ-ಅಂಕೋಲಾ ಹೊಸ ಮಾರ್ಗ ನಿರ್ಮಾಣಕ್ಕೆ ಕೇಂದ್ರಕ್ಕೆ ಪತ್ರ ಬರೆದ ದೇಶಪಾಂಡೆ

Last Updated 6 ಜೂನ್ 2020, 6:25 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ಹುಬ್ಬಳ್ಳಿ-ಅಂಕೋಲಾ ಹೊಸ ಬ್ರಾಡ್ ಗೇಜ್ ರೈಲ್ವೆ ಮಾರ್ಗ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಅನುಮತಿ ನೀಡಬೇಕೆಂದು ಶಾಸಕ ಆರ್.ವಿ.ದೇಶಪಾಂಡೆ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಪರಿಸರ ಸಚಿವರಾದ ಪ್ರಕಾಶ್ ಜಾವ್ದೇಕರ್ ಅವರಿಗೆ ಪತ್ರ ಬರೆದಿರುವ ಅವರು, ಈ ರೈಲು ಮಾರ್ಗಕ್ಕೆ ಅಂದಿನ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರು ಅಡಿಗಲ್ಲು ಹಾಕಿದ್ದರು. ಜೊತೆಗೆ ಹುಬ್ಬಳ್ಳಿಯಿಂದ ಕಲಘಟಗಿವರೆಗೆ ಟ್ರ್ಯಾಕ್ ನ ಒಂದು ಭಾಗ ಪೂರ್ಣಗೊಂಡಿದೆ. ಮುಂದಿನ ಭಾಗದ ಕಾಮಗಾರಿಯು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಬರುವುದರಿಂದ ಅಂದರೆ ಕಾರವಾರ, ಯಲ್ಲಾಪುರ ಮತ್ತು ಧಾರವಾಡ ವಿಭಾಗದ ಸುಮಾರು 595.64 ಹೆಕ್ಟರ್ ನಷ್ಟು ಅರಣ್ಯ ಭೂಮಿ ಉಪಯೋಗಿಸಬೇಕಾಗುತ್ತದೆ.

ಹೀಗಾಗಿ ಇದಕ್ಕೆ ಕೇಂದ್ರ ಸರ್ಕಾರದ ಅನುಮತಿ ಬೇಕಾಗಿದ್ದು, ಕೇಂದ್ರ ಸರ್ಕಾರ ಈ ಪ್ರದೇಶದ ಬಳಕೆಗೆ ಅನುಮತಿ ನೀಡಬೇಕೆಂದು ಪತ್ರ ಬರೆದಿದ್ದಾರೆ. ಈಗಾಗಲೇ ರಾಜ್ಯ ವನ್ಯಜೀವಿ ಮಂಡಲಿಯಲ್ಲಿ ರೈಲು ಮಾರ್ಗ ನಿರ್ಮಾಣಕ್ಕೆ ಅರಣ್ಯ ಪ್ರದೇಶ ಬಳಕೆಗೆ ಅನುಮತಿ ನೀಡಿದೆ. ಸದರಿ ಪ್ರಸ್ತಾವನೆಯನ್ನು ಕೇಂದ್ರ ವನ್ಯಜೀವಿ ಮಂಡಳಿಗೆ ಅನುಮತಿಗಾಗಿ ಕಳುಹಿಸಲಾಗಿದೆ. ಹೀಗಾಗಿ ನಮ್ಮ ರಾಜ್ಯದ ಕೇಂದ್ರ ಸಚಿವರೂ ಕೂಡಾ ಈ ವಿಷಯದ ಬಗ್ಗೆ ಕೇಂದ್ರ ಪರಿಸರ ಸಚಿವರಿಗೆ ಮನವರಿಕೆ ಮಾಡಿಕೊಟ್ಟು, ಅನುಮತಿ ನೀಡಲು ಒತ್ತಾಯಿಸಬೇಕೆಂದು ಕೋರುತ್ತೇನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT