ಬೆಂಗಳೂರು: ಬೆಳಗಾವಿಯಲ್ಲಿ 2016 ಹಾಗೂ 17ನೇ ಸಾಲಿನಲ್ಲಿ ನಡೆದ ವಿಧಾನಮಂಡಲ ಚಳಿಗಾಲ ಅಧಿವೇಶನದ ವೇಳೆ ದುಂದು ವೆಚ್ಚ ಮಾಡಲಾಗಿದೆ ಎಂಬ ಆರೋಪದ ಮೇಲೆ ವಿಧಾನಸಭೆಸಚಿವಾಲಯ ಕಾರ್ಯದರ್ಶಿ ಎಸ್.ಮೂರ್ತಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಅಕ್ರಮ ಹಿನ್ನೆಲೆ ಪರಿಶೀಲನೆ ನಡೆಸಲು ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಹೆಚ್ಚುವರಿ ನಿರ್ದೇಶಕ ಎನ್.ಬಿ. ಶಿವರುದ್ರಪ್ಪ ನೇತೃತ್ವದ ಐವರು ಅಧಿಕಾರಿಗಳ ತಂಡವನ್ನು ರಚಿಸಲಾಗಿತ್ತು. ಈ ತಂಡ ಸಲ್ಲಿಸಿರುವ ವರದಿ ಅಧರಿಸಿ ಕ್ರಮ ಜರುಗಿಸಲಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ಇದನ್ನೂ ಓದಿ...ಅಧಿವೇಶನ ವೆಚ್ಚದಲ್ಲಿ ಅಕ್ರಮ

ಲೆಕ್ಕಪರಿಶೋಧನೆ ತಂಡ ಸಲ್ಲಿಸಿರುವ 40 ಪುಟಗಳ ವರದಿಯನ್ನು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ ಅವರು ವಿಧಾನಸಭೆ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರಿಗೆ ಸಲ್ಲಿಸಿದ್ದರು.

ಕೆಲವೊಂದು ಸೇವೆಗಳಿಗೆ ಎರಡೆರಡು ಸಲ ಬಿಲ್ ಪಾವತಿ ಮಾಡಲಾಗಿದೆ ಎಂದೂ ವರದಿಯಲ್ಲಿ ಪ್ರಸ್ತಾಪಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.