ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್.‌ ನಾರಾಯಣ್ ನೇತೃತ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಹಾಡು

Published 13 ಮಾರ್ಚ್ 2024, 11:19 IST
Last Updated 13 ಮಾರ್ಚ್ 2024, 11:19 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಐದು ಗ್ಯಾರಂಟಿ ಯೋಜನೆಗಳನ್ನು ವಿವರಿಸುವ ವಿಡಿಯೊ ಸಾಂಗ್‌ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಗ್ಯಾರಂಟಿ‌ ಯೋಜನೆಗಳ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ‘ಭಾಗ್ಯರಾಜ ನಮ್ಮ ಮುಖ್ಯಮಂತ್ರಿ’ ವಿಡಿಯೊ ಸಾಂಗ್‌ ಬಿಡುಗಡೆಗೊಳಿಸಿದರು.

ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ ಎಸ್.‌ನಾರಾಯಣ್ ಅವರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳ ಕುರಿತಂತೆ ನಾಲ್ಕು ಹಾಡುಗಳಿಗೆ ಸಾಹಿತ್ಯ ಬರೆದು ಚಿತ್ರೀಕರಿಸಿದ್ದಾರೆ. ನಿರ್ಮಾಪಕ ಎಸ್.ಆರ್. ಸನತ್ ಕುಮಾರ್ ಅವರು ಈ ಹಾಡಿನ ಚಿತ್ರೀಕರಣಕ್ಕೆ ಬಂಡವಾಳ ಹೂಡಿದ್ದಾರೆ.

‘ಈವರೆಗೆ ನಾನು ಸಿನಿಮಾ ಹಾಡುಗಳನ್ನು ಮಾತ್ರ ಬರೆಯುತ್ತಿದ್ದೆ‌. ಮೊದಲ ಬಾರಿಗೆ ಒಬ್ಬ ಜನಪ್ರಿಯ ಸಿಎಂ ಮಾಡಿದ ಸಾಧನೆಗಳ‌ನ್ನು ಕಂಡು ಅವರ ಬಗ್ಗೆ ಬರೆಯಬೇಕು ಅನ್ನಿಸಿತು. ಇದು ಹೊಗಳಿಕೆಯಲ್ಲ, ನನಗನಿಸಿದ್ದನ್ನು ಬರೆದಿದ್ದೇನೆ’ ಎಂದರು ಎಸ್‌.ನಾರಾಯಣ್‌.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT