ಬೆಂಗಳೂರು: ಯಡಿಯೂರಪ್ಪ ಮಂತ್ರಿ ಮಂಡಲದಲ್ಲಿ ಎಲ್ಲ ಸಚಿವರೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಸ್.ಟಿ.ಸೋಮಶೇಖರ್ ಅವರಂತೂ ರಾಜ್ಯದಲ್ಲೇ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಚಿವ. ಮೈಸೂರಿನ ಜಿಲ್ಲಾ ಉಸ್ತುವಾರಿಯಾಗಿ ಮತ್ತು ಕೋವಿಡ್ ನಿಯಂತ್ರಣಕ್ಕಾಗಿ ಶ್ರಮಪಟ್ಟಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್‌ಶ್ಲಾಘಿಸಿದರು.

ಯಶವಂತಪುರದಲ್ಲಿ ಕೋವಿಡ್‌ನಿಂದ ಮೃತಪಟ್ಟವರಿಗೆ ತಲಾ ₹1 ಲಕ್ಷ ಸಹಾಯಧನ ವಿತರಿಸುವ ಕಾರ್ಯಕ್ರಮದ ಬಳಿಕ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಅವರು ಸುದ್ದಿಗಾರರ ಜತೆ ಮಾತನಾಡಿದರು.

ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ನಳಿನ್ ಕುಮಾರ್ ಕಟೀಲ್

ಸಿ.ಪಿ.ಯೋಗೇಶ್ವರ್ ಅವರ ಹೇಳಿಕೆಯ ಬಗ್ಗೆ ಸಚಿವ ಎಸ್.ಟಿ.ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದರು. ಯಾರು ಮೂರು ಪಕ್ಷಗಳನ್ನು ಬದಲಾವಣೆ ಮಾಡಿ ಬಂದಿರುತ್ತಾರೋ ಅವರು ಮಾತ್ರ ಮೂರು ಪಕ್ಷಗಳ ಹೊಂದಾಣಿಕೆ ಸರ್ಕಾರ ಎಂದು ಹೇಳಲು ಸಾಧ್ಯ. ನಮ್ಮ ಸರ್ಕಾರ ಯಾವುದೇ ಪಕ್ಷದ ಜತೆಗೂ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದರು.

ಆಡಳಿತದಲ್ಲಿ ವಿಜಯೇಂದ್ರ ಅವರು ಎಳ್ಳಷ್ಟು ಹಸ್ತಕ್ಷೇಪ ಮಾಡಿರುವ ನಿದರ್ಶನವಿಲ್ಲ. ನನ್ನ ಇಲಾಖೆಯನ್ನು ಮುಕ್ತವಾಗಿ ನಿರ್ವಹಿಸುತ್ತಿದ್ದೇನೆ. ಯಾರೂ ಹಸ್ತಕ್ಷೇಪ ಮಾಡಿಲ್ಲ ಎಂದು ಸೋಮಶೇಖರ್ ತಿಳಿಸಿದರು.

ಮುಖ್ಯಮಂತ್ರಿ ಬದಲಾವಣೆ ವಿಚಾರ: ಬಿಜೆಪಿಯಲ್ಲಿ ಹೊರಗೆ ತಣ್ಣಗೆ, ಒಳಗೆ ಧಗೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.