ಬೆಂಗಳೂರು: ‘ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ತಮ್ಮ ಮಗನ ಚುನಾವಣೆಗೆ ₹100 ಕೋಟಿ ಖರ್ಚು ಮಾಡಿದ್ದಾರೆ. ಅಷ್ಟು ಹಣ ಖರ್ಚು ಮಾಡಲು ಎಷ್ಟು ಕಮಿಷನ್ ತೆಗೆದುಕೊಂಡಿದ್ದಾರೆ’ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಪ್ರಶ್ನಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ಕಾಂಗ್ರೆಸ್ ಸರ್ಕಾರದ ವಿರುದ್ಧ ಶೇಕಡ 60ರಷ್ಟು ಲಂಚದ ಆರೋಪ ಮಾಡಿದ್ದಾರೆ. ಅದಕ್ಕೂ ಮೊದಲು ₹100 ಕೋಟಿ ಖರ್ಚು ಮಾಡಿದ್ದಾರೆ ಎಂದು ಜನ ಹೇಳುತ್ತಿದ್ದಾರೆ. ಆದ್ದರಿಂದ, ಜನರಿಗೆ ವಿವರಣೆ ಕೊಡಲಿ’ ಎಂದರು.

‘ನಾನು ಕೂಡ ಚನ್ನಪಟ್ಟಣದವನೇ. ಮೊದಲೆಲ್ಲ ಚುನಾವಣೆ ಸಮಯದಲ್ಲಿ ಹತ್ತು ರೂಪಾಯಿ ಖರ್ಚು ಮಾಡದ ಕುಮಾರಸ್ವಾಮಿ ಈಗ ಅಷ್ಟು ಹಣ ಖರ್ಚು ಮಾಡಲು ಎಷ್ಟು ಕಮಿಷನ್ ತೆಗೆದುಕೊಂಡಿದ್ದಾರೆ. ಅವರೇನು ಆಲೂಗಡ್ಡೆ ಮಾರಿ ಅಷ್ಟು ಹಣ ಸಂಪಾದಿಸಿದ್ದಾರಾ’ ಎಂದು ಅವರು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.