ಸಾಸ್ವೆಹಳ್ಳಿ: ಇಲ್ಲಿನ ಅಂಗಡಿಯೊಂದರಲ್ಲಿ ಗುರುವಾರ ಕಬ್ಬಿನ ಹಾಲು ಕುಡಿದ ಬೀರಗೊಂಡನಹಳ್ಳಿಯ ವಿಜಯ್ ಎಂಬವರ ಕುಟುಂಬದ ಮೂವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆಯ ವಿವರ: ಬಿಸಿಲಿನ ಬೇಗೆ ನೀಗಿಸಿಕೊಳ್ಳಲು ವಿಜಯ್ ಅವರು ತಮ್ಮ ಪತ್ನಿ ಮತ್ತು ಮಗಳೊಂದಿಗೆ ಸ್ಥಳೀಯ ಕಬ್ಬಿನ ಹಾಲಿನ ಅಂಗಡಿಗೆ ತೆರಳಿದ್ದರು. ಹಾಲು ಕುಡಿದ ಕೆಲವೇ ನಿಮಿಷಗಳಲ್ಲಿ ಮೂವರಲ್ಲೂ ವಾಂತಿ ಕಾಣಿಸಿಕೊಂಡಿತು. ತಕ್ಷಣವೇ ಅವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಚಿಕಿತ್ಸೆಯ ನಂತರ ಚೇತರಿಸಿಕೊಂಡಿದ್ದು, ಮನೆಗೆ ಮರಳಿದ್ದಾರೆ.

‘ಕಳಪೆ ಗುಣಮಟ್ಟದ ಕಬ್ಬು ಅಥವಾ ಅಶುದ್ಧ ನೀರು, ಮಂಜುಗಡ್ಡೆ, ನಿಂಬೆಹಣ್ಣು ಬಳಕೆಯಿಂದ ಕಬ್ಬಿನ ಹಾಲು ಕುಡಿದವರು ವಾಂತಿ ಮಾಡಿಕೊಂಡಿರುವ ಸಾಧ್ಯತೆ ಇದೆ. ಈ ಬಗ್ಗೆ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದ್ದು, ಅಂಗಡಿಯವರಿಗೆ ನೋಟಿಸ್ ನೀಡಲಾಗುವುದು’ ಎಂದು ಸಾಸ್ವೆಹಳ್ಳಿಯ ಪ್ರಾಥಮಿಕ ಆರೋಗ್ಯಾಧಿಕಾರಿ ಡಾ. ಮಂಜುನಾಥ್ ಕೆ.ಎಸ್. ಹೇಳಿದರು.

ಪ್ರಭಾರ ತಾಲ್ಲೂಕು ಆರೋಗ್ಯಾಧಿಕಾರಿ ಗಿರೀಶ್ ಎನ್.ಎಚ್. ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿ, ‘ಸಾಸ್ವೆಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳ ಹೋಟೆಲ್ ಮತ್ತು ತಿಂಡಿ ಅಂಗಡಿಗಳಲ್ಲಿ ಸ್ವಚ್ಛತೆ ನಿರ್ವಹಣೆ ಬಗ್ಗೆ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುವುದು. ಆಹಾರ ನಿರೀಕ್ಷಕರಿಗೆ ಸೂಚನೆ ನೀಡಿ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗುಣಮಟ್ಟದ ಪದಾರ್ಥಗಳನ್ನೇ ಬಳಸುವಂತೆ ಎಚ್ಚರಿಕೆ ನೀಡಲಾಗುವುದು’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-43-535246039

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.