ಬೆಂಗಳೂರು: ‘ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಕೋಮು ಚಟುವಟಿಕೆಗಳನ್ನು ಹತ್ತಿಕ್ಕಲು ಹೊಸದಾಗಿ ವಿಶೇಷ ಕಾರ್ಯಪಡೆ (ಎಸ್ಎಎಫ್) ರಚಿಸಲಾಗಿದ್ದು, ಇದು ಕಾಯಂ ಆಗಿ ಇರಬೇಕೆಂದೇನೂ ಇಲ್ಲ. ಶಾಂತಿ ನೆಲಸುವುದಷ್ಟೇ ಮುಖ್ಯ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ವಿಧಾನಸಭೆಯಲ್ಲಿ ಬಿಜೆಪಿಯ ವೇದವ್ಯಾಸ ಕಾಮತ್ ಅವರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಹದಗೆಟ್ಟಿದ್ದು, ಅಲ್ಲಿನವರು ತಮ್ಮ ಮಕ್ಕಳನ್ನು ವ್ಯಾಸಂಗಕ್ಕಾಗಿ ಇತರೆಡೆ ಕಳುಹಿಸುತ್ತಿದ್ದಾರೆ. ಉದ್ಯಮಿಗಳು ಹೂಡಿಕೆಗೆ ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾಹಿತಿ ಪಕ್ಷದ ಚುನಾವಣಾ ಪ್ರಣಾಳಿಕೆ ಸಮಿತಿಯ ಮಾಹಿತಿ ಸಂಗ್ರಹದ ವೇಳೆ ಲಭ್ಯವಾಗಿತ್ತು. ಕೋಮುಸೌಹಾರ್ದವೂ ಹಾಳಾಗಿದೆ ಎಂಬ ಆತಂಕವೂ ಆ ಭಾಗದ ಜನಪ್ರತಿನಿಧಿಗಳಲ್ಲಿದೆ’ ಎಂದರು.

‘ನಾನು ಇತ್ತೀಚೆಗೆ ಶಾಂತಿ ಸಭೆ ನಡೆಸಿದ್ದು, ಯಶಸ್ವಿಯಾಗಿದೆ. ಶಾಂತಿಯಿಂದ ಇರಬೇಕು ಎಂಬ ಭಾವನೆ ಎಲ್ಲರಲ್ಲೂ ಬರುತ್ತಿದೆ. ಮನಸ್ಸುಗಳನ್ನು ಒಂದುಗೂಡಿಸುವ ಪ್ರಯತ್ನ ನಡೆದಿದೆ’ ಎಂದೂ ಹೇಳಿದರು.

‘ವಿಶೇಷ ಕಾರ್ಯಪಡೆಯು ಅನಗತ್ಯವಾಗಿ ಯಾರಿಗೂ ತೊಂದರೆ ನೀಡಿಲ್ಲ. ಮಧ್ಯರಾತ್ರಿ ಮನೆಗೆ ಹೋಗಿ ಹಿರಿಯ ನಾಗರಿಕರನ್ನು ವಿಚಾರಣೆ ನಡೆಸುವ ಕೆಲಸವನ್ನೂ ಮಾಡಿಲ್ಲ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಸ್ಥಿತಿಗತಿ ಬಗ್ಗೆ ನಾನೇ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ. ಜನಪ್ರತಿನಿಧಿಗಳ ಸಹಕಾರವೂ ಮುಖ್ಯ’ ಎಂದರು.

‘ದಕ್ಷಿಣ ಕನ್ನಡ ಜಿಲ್ಲೆಯು ಕೇರಳಕ್ಕೆ ಹೊಂದಿಕೊಂಡಿದ್ದು, ಡ್ರಗ್ಸ್, ಗಾಂಜಾ ಹಾವಳಿ ವ್ಯಾಪಕವಾಗಿದ್ದು, ನಿಗ್ರಹಿಸಬೇಕಿದೆ. ವಿಶೇಷ ಕಾರ್ಯಪಡೆ ರಚನೆ ಉತ್ತಮವಾಗಿದೆ. ಗೋವು ಕಳವು, ಗೋಹತ್ಯೆಯಾದರೂ ಈ ರೀತಿ ಘಟನೆಗಳು ಸಂಭವಿಸುತ್ತವೆ. ಹೀಗಾಗಿ ಗೋಹತ್ಯೆ ಹಾಗೂ ಲವ್ ಜಿಹಾದ್ನಂಥ ಪ್ರಕರಣಗಳನ್ನು ಕಾರ್ಯಪಡೆ ವ್ಯಾಪ್ತಿಗೆ ತರಬೇಕು’ ಎಂದು ವೇದವ್ಯಾಸ ಕಾಮತ್ ಆಗ್ರಹಿಸಿದರು.

ಆಗ ಪರಮೇಶ್ವರ, ‘ಸಂಭಾವ್ಯ ಕೋಮು ಹಿಂಸಾಚಾರದ ಬಗ್ಗೆ ಕಣ್ಗಾವಲು ಎಂದು ಉಲ್ಲೇಖಿಸಲಾಗಿದ್ದು, ಆ ಅಂಶಗಳೆಲ್ಲಾ ಇದರಲ್ಲಿ ಸೇರ್ಪಡೆಯಾಗುತ್ತವೆ. ಜಾನುವಾರು ಕಳ್ಳತನ, ಸಾಗಣೆ, ಮಾದಕ ವಸ್ತು ಸಾಗಣೆಯಂಥ ಪ್ರಕರಣಗಳ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ಗೋಹತ್ಯೆ ಮಾಡಿದವರನ್ನು ರಕ್ಷಣೆ ಮಾಡಲಾಗುತ್ತದೆಯೇ’ ಎಂದು ಪ್ರಶ್ನಿಸಿದರು.

ಸಭಾಧ್ಯಕ್ಷ ಯು.ಟಿ. ಖಾದರ್, ‘ಕರಾವಳಿ ಭಾಗದಲ್ಲಿ ದ್ವೇಷದಿಂದ ಹಿಂಸಾಚಾರ ನಡೆಯುತ್ತಿಲ್ಲ. ಭಯದ ವಾತಾವರಣವಿದೆ. ಗೃಹ ಸಚಿವರ ಕಚೇರಿಯಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಆಯೋಜಿಸಿ ಸಂಬಂಧಪಟ್ಟ ಜಿಲ್ಲೆಗಳ ಜನಪ್ರತಿನಿಧಿಗಳನ್ನು ಆಹ್ವಾನಿಸಿದರೆ ಚರ್ಚಿಸಿ, ಸೂಕ್ತ ಪರಿಹಾರ ಕಂಡುಕೊಳ್ಳಬಹುದು’ ಎಂದು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.