‘ಅಸ್ಪೃಶ್ಯತೆಯನ್ನು ನಿಷೇಧಿಸಲಾಗಿದ್ದು, ಯಾವುದೇ ರೂಪದಲ್ಲಿ ಅದರ ಆಚರಣೆ ಅಪರಾಧ. ಸ್ವಚ್ಛತಾ ಕಾರ್ಮಿಕರನ್ನು ಗೌರವಿಸುವುದು ನೈತಿಕ ಬಾಧ್ಯತೆ ಅಷ್ಟೇ ಅಲ್ಲ, ಸಮಾಜದ ಕರ್ತವ್ಯವೂ ಆಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ವೈಯಕ್ತಿಕ ಘನತೆ ಮತ್ತು ಗೌರವಕ್ಕೆ ಅರ್ಹರಾಗಿರುತ್ತಾರೆ. ಹೀಗಾಗಿ, ಯಾವುದೇ ಸ್ಥಳದಲ್ಲಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಸದಸ್ಯರನ್ನು ಜಾತಿ ಹೆಸರಿನಲ್ಲಿ ನಿಂದಿಸುವುದು, ಉದ್ದೇಶಪೂರ್ವಕವಾಗಿ ಅವಮಾನಿಸುವುದು, ಬೆದರಿಸುವುದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧ’ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.