ಬೀದರ್: ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಪ್ರತಿ ಲೀಟರ್ಗೆ ತಲಾ ₹3 ಹೆಚ್ಚಿಸಿರುವ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರ ಅತ್ಯಂತ ಖಂಡನೀಯ. ಈ ನಿರ್ಧಾರವು ಬಡ, ಮಧ್ಯಮ ವರ್ಗದ ಜನರ ಕುತ್ತಿಗೆಗೆ ಆರ್ಥಿಕ ಉರುಳು ಎಂದು ಬೀದರ್ ಲೋಕಸಭಾ ಕ್ಷೇತ್ರದ ಸಂಸದ ಸಾಗರ್ ಖಂಡ್ರೆ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ದೇಶದ ಹಾಗೂ ಜಿಲ್ಲೆಯ ಜನಸಾಮಾನ್ಯರು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಈಗಾಗಲೇ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇಂಥ ಪರಿಸ್ಥಿತಿಯಲ್ಲಿ ಇಂಧನ ದರವನ್ನು ಮತ್ತೆ ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಈಗಾಗಲೇ ಬೆಲೆ ಏರಿಕೆಯ ಸುಳಿಗೆ ಸಿಲುಕಿ ತತ್ತರಿಸುತ್ತಿರುವ ಬಡ ಹಾಗೂ ಮಧ್ಯಮ ವರ್ಗದ ಜನರ ಮೇಲೆ ಈ ದರ ಏರಿಕೆ ಮತ್ತಷ್ಟು ಆರ್ಥಿಕ ಹೊರೆಯನ್ನು ಹೊರಿಸಿದೆ ಎಂದು ಶನಿವಾರ ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ನಿರಂತರವಾಗಿ ಏರಿಕೆಯಾಗುತ್ತಿರುವ ಇಂಧನ, ಅಡುಗೆ ಗ್ಯಾಸ್ ಹಾಗೂ ಅಗತ್ಯ ವಸ್ತುಗಳ ಬೆಲೆಯಿಂದಾಗಿ ಸಾಮಾನ್ಯ ಜನರ ಬದುಕು ದುಸ್ತರವಾಗಿದೆ. ಸಾರಿಗೆ ವೆಚ್ಚ ದುಬಾರಿಯಾಗುವುದರಿಂದ ತರಕಾರಿ, ಧಾನ್ಯ ಸೇರಿದಂತೆ ಪ್ರತಿಯೊಂದು ವಸ್ತುವಿನ ಬೆಲೆಯೂ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ. ಜನಸಾಮಾನ್ಯರಿಗೆ ಆರ್ಥಿಕ ನೆರವು ಹಾಗೂ ಪರಿಹಾರ ನೀಡಬೇಕಾದ ಕೇಂದ್ರ ಸರ್ಕಾರ, ಅದಕ್ಕೆ ತದ್ವಿರುದ್ಧವಾಗಿ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿರುವುದು ಪ್ರಜಾಪ್ರಭುತ್ವದ ದುರಂತ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರವು ದೇಶದ ಜನರ ಹಿತದೃಷ್ಟಿಯಿಂದ ಹಾಗೂ ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿಯನ್ನು ಮನಗಂಡು ತಕ್ಷಣವೇ ಜಾರಿಗೆ ಬರುವಂತೆ ಪೆಟ್ರೋಲ್, ಡೀಸೆಲ್ ಹಾಗೂ ಇತರೆ ಅಗತ್ಯ ವಸ್ತುಗಳ ಮೇಲಿನ ದರ ಏರಿಕೆಯನ್ನು ಹಿಂಪಡೆಯಬೇಕು. ಬೆಲೆ ಇಳಿಕೆ ಮಾಡುವ ಮೂಲಕ ಜನರಿಗೆ ಸಮಾಧಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.