ಬೆಂಗಳೂರು: ಸಹಕಾರ ಇಲಾಖೆ ವತಿಯಿಂದ ನೀಡಲಾಗುವ ‘ಸಹಕಾರ ರತ್ನ’ ಪ್ರಶಸ್ತಿಗೆ ದಿ ಬೆಂಗಳೂರು ಸಿಟಿ ಕೋ–ಆಪರೇಟಿವ್ ಬ್ಯಾಂಕ್ ಲಿಮಿಟೆಡ್ನ ಅಧ್ಯಕ್ಷ ಆವಲಹಳ್ಳಿ ಆರ್.ಚಂದ್ರಪ್ಪ ಆಯ್ಕೆಯಾಗಿದ್ದಾರೆ.
ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಭಾನುವಾರ ಬೆಳಿಗ್ಗೆ11 ಗಂಟೆಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.