ಕಲಬುರ್ಗಿ: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ನೌಕರರು ಮುಷ್ಕರದ ಸಂದರ್ಭದಲ್ಲಿ ಇರಿಸಿದ್ದ ಪ್ರಮುಖ ಬೇಡಿಕೆ 6ನೇ ವೇತನ ಆಯೋಗದಂತೆ ವೇತನ ನೀಡುವ ಬಗ್ಗೆ ಏಪ್ರಿಲ್ 2ರ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಸಾರಿಗೆ ಖಾತೆ ಹೊಂದಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

’ಮತ್ತೆ ಮುಷ್ಕರ ನಡೆಸುವುದಾಗಿ ನೌಕರರ ಸಂಘಟನೆ ತಿಳಿಸಿದೆ. ಸಂಘಟನೆ ಪ್ರಮುಖರೊಂದಿಗೆ ಮಾತುಕತೆ ನಡೆಸಿದ್ದೇವೆ’ ಎಂದು ಇಲ್ಲಿ ತಿಳಿಸಿದರು.

ಕರ್ತವ್ಯಕ್ಕೆ ಗೈರಾದರೆ ವೇತನ ಕಡಿತ:ಮುಷ್ಕರಕ್ಕೆ ಸಾರಿಗೆ ನೌಕರರು ಪಟ್ಟುಹಿಡಿರುವ ಬೆನ್ನಲೇ ಕರ್ತವ್ಯಕ್ಕೆ ಗೈರಾಗುವವರ ವೇತನ ಕಡಿತಗೊಳಿಸಿ ಶಿಸ್ತು ಕ್ರಮ ಜರುಗಿಸುವ ಎಚ್ಚರಿಕೆಯನ್ನು ಕೆಎಸ್ಆರ್ಟಿಸಿ ನೀಡಿದೆ. ‘ಏಪ್ರಿಲ್ 7ರಿಂದ ಬಸ್ಗಳ ಕಾರ್ಯಾಚರಣೆ ಸಾಮಾನ್ಯ ಸ್ಥಿತಿಗೆ ಬರುವ ತನಕ ಕೆಲಸಕ್ಕೆ ಗೈರಾಗುವ ನೌಕರರ ವಿರುದ್ಧ ‘ಕೆಲಸ ಮಾಡದಿದ್ದಾಗ ವೇತನವಿಲ್ಲ’ ಎಂಬ ತತ್ವದ ಅನ್ವಯ ಕ್ರಮ ಕೈಗೊಳ್ಳಲಾಗುವುದು’ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಆದೇಶದಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.