ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು.
— CM of Karnataka (@CMofKarnataka) November 14, 2025
ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ.… pic.twitter.com/cxe2nX7sdq
ಉಸಿರು ಚೆಲ್ಲಿದ "ವೃಕ್ಷಮಾತೆ"
— DK Shivakumar (@DKShivakumar) November 14, 2025
ಮರಗಳನ್ನೇ ತಮ್ಮ ಮಕ್ಕಳಂತೆ ಸಾಕಿ ಸಲಹಿದ ʻವೃಕ್ಷಮಾತೆʼ ಎಂದೇ ಪ್ರಸಿದ್ಧರಾಗಿದ್ದ ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರು ನಿಧನರಾದ ಸುದ್ದಿ ಅತೀವ ದುಖಃ ನೀಡಿದೆ. ನಿಸರ್ಗ ಪ್ರೀತಿಯ ಮೂಲಕ ಇಡೀ ಜಗತ್ತಿಗೆ ಮಾದರಿಯಾಗಿದ್ದ ಅವರ ಅಸಾಮಾನ್ಯ ಬದುಕು ಮತ್ತು ಪರಿಸರಕ್ಕೆ ಅವರ ಕೊಡುಗೆ ಚಿರಸ್ಮರಣೀಯ.… pic.twitter.com/yFu7awKms4
ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ, ವೃಕ್ಷಮಾತೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಪಾರ್ಥಿವ ಶರೀರಕ್ಕೆ ಭಾವಪೂರ್ಣ ಅಂತಿಮ ನಮನ ಸಲ್ಲಿಸಿದೆ.
— Eshwar Khandre (@eshwar_khandre) November 14, 2025
ಮರಗಳನ್ನು ಮಕ್ಕಳಂತೆ ಬೆಳೆಸಿದ ಈ ಮಹಾತಾಯಿ, ಪರಿಸರ ಪ್ರೇಮದ ಜೀವಂತ ರೂಪ. ಅವರ ನಿಸ್ವಾರ್ಥ ಸೇವೆ, ಸರಳತೆ, ಮಮತೆ ಇವೆಲ್ಲವೂ ನಮ್ಮೆಲ್ಲರಿಗೂ ಶಾಶ್ವತ ಪ್ರೇರಣೆ. pic.twitter.com/9IUluOw4aZ
“ಹಸಿರು” ತಾಯಿ ಕೊನೆಯುಸಿರು..!
— DK Suresh (@DKSureshINC) November 14, 2025
ಪದ್ಮಶ್ರೀ ಪುರಸ್ಕೃತೆ, ಪರಸರ ಪ್ರೇಮಿ, ಲಕ್ಷಾಂತರ ಗಿಡಗಳನ್ನು ಮಕ್ಕಳಂತೆ ಸಾಕಿ ಸಲಹಿದ ವೃಕ್ಷಮಾತೆ ಎಂದೇ ಹೆಸರುವಾಸಿಯಾಗಿದ್ದ ಸಾಲುಮರದ ತಿಮ್ಮಕ್ಕ ಅವರು ಉಸಿರಾಟದ ಸಮಸ್ಯೆಯಿಂದ ನಿಧನರಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ.
ಮರಗಳನ್ನು ನೆಟ್ಟು ಪೋಷಿಸುವ ಮೂಲಕ ಇಡೀ ಜಗತ್ತಿಗೆ ಮಾದರಿಯಾಗಿದ್ದ ಸಾಲುಮರದ… pic.twitter.com/O8VZfheprm
ಪರಿಸರಕ್ಕಾಗಿ ತಮ್ಮ ಇಡೀ ಬದುಕನ್ನೇ ಮುಡಿಪಿಟ್ಟು ಪ್ರಕೃತಿಗಾಗಿಯೇ ಬದುಕಿ ಬಾಳಿದ ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು.
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 14, 2025
ನಾಡಿಗೆ ಅವರು ನೀಡಿರುವ ಕೊಡುಗೆ, ಅವರಿಂದ ದೊರೆತಿರುವ ಪ್ರೇರಣೆ ಅಜರಾಮರ. ಅಗಲಿದ ಆ ಚೇತನಕ್ಕೆ ಚಿರಶಾಂತಿ ದೊರೆಯಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ… pic.twitter.com/6s44LH0HE8
ಪದ್ಮಶ್ರೀ ಪುರಸ್ಕೃತೆ, ಪರಿಸರವಾದಿ "ಹಸಿರೆ ಉಸಿರು" ಎಂದು ಜೀವಿಸಿದ್ದ ವೃಕ್ಷಮಾತೆ, ಶತಾಯುಷಿ ಸಾಲು ಮರದ ತಿಮ್ಮಕ್ಕ ಅವರ ನಿಧನದ ಸುದ್ದಿ ಮನಸ್ಸಿಗೆ ಅತೀವ ನೋವು ತಂದಿದೆ.
— H D Devegowda (@H_D_Devegowda) November 14, 2025
1/3 pic.twitter.com/dowbkst2hv
ನಾಡಿನ ಹಿರಿಯಚೇತನ, ವೃಕ್ಷಮಾತೆ ಪದ್ಮಶ್ರೀ ಶ್ರೀ ಸಾಲುಮರದ ತಿಮ್ಮಕ್ಕ ಅವರ ಅಗಲಿಕೆಯ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖವಾಯಿತು. ಅವರಿಗೆ ನನ್ನ ಭಾವಪೂರ್ಣ ನಮನಗಳು.
— Dr. G Parameshwara (@DrParameshwara) November 14, 2025
ಸಸಿಗಳನ್ನೇ ಮಕ್ಕಳೆಂದು ಭಾವಿಸಿ, ನೀರು ಎರೆದು ಅವುಗಳನ್ನು ಪೋಷಿಸಿ ಸಾವಿರಾರು ಮರಗಳನ್ನು ಬೆಳೆಸುವ ಮುಖೇನ ವಿಶ್ವಕ್ಕೆ ಮಾದರಿಯಾಗಿದ್ದರು. ಯಾವುದೇ ಸ್ವಾರ್ಥ,… pic.twitter.com/MvPI734jQs
ವೃಕ್ಷಮಾತೆ, ಶತಾಯುಷಿ, ಪದ್ಮಶ್ರೀ, ಸಾಲುಮರದ ತಿಮ್ಮಕ್ಕ ಅವರ ಅಗಲಿಕೆಯ ಸುದ್ದಿ ತಿಳಿದು ದುಃಖಿತನಾಗಿದ್ದೇನೆ.
— M B Patil (@MBPatil) November 14, 2025
ಸಾವಿರಾರು ಮರಗಳನ್ನು ನೆಟ್ಟು, ನಿಸರ್ಗದೊಂದಿಗೆ ಮಾನವನ ಬಾಂಧವ್ಯವನ್ನು ಮರುಜೀವಗೊಳಿಸಿದ ತಿಮ್ಮಕ್ಕವರು ಪರಿಸರ ಪ್ರೇಮದ ಜೀವಂತ ರೂಪವಾಗಿದ್ದರು.
ಅವರು ನೆಟ್ಟ ಮರಗಳು, ನೀಡಿದ ನೆರಳು, ಸೃಷ್ಟಿಸಿದ ಹಸಿರು ಉಸಿರು-ಎಲ್ಲವೂ ಅವರ… pic.twitter.com/u4ChHi3i04
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.