ಬೆಂಗಳೂರು: ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಎಂಬಾತ ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಈ ಬಗ್ಗೆ ಮಾಹಿತಿ ನೀಡಲು ವಿಫಲವಾಗಿರುವ ಇಲಾಖೆಯ ಸಾಮಾಜಿಕ ಜಾಲತಾಣ ವಿಭಾಗಕ್ಕೆ ಡಿಜಿಪಿ ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ವಿಭಾಗದ ನಿರ್ವಾಹಕರು, ಸಮೀರ್ ಹರಿಬಿಟ್ಟಿದ್ದ ವಿಡಿಯೊ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿಲ್ಲ. ಅದರಿಂದ ಸಮಾಜದಲ್ಲಿ ಪರ-ವಿರೋದ ಅನಿಸಿಕೆಗಳು ಉಂಟಾಗಿವೆ. ಕಾನೂನು ಮತ್ತು ಸುವ್ಯವಸ್ಥೆ ಹದಗೆಡುವ ಸಂಭವವಿದೆ. ಆ ಘಟಕದ ಅಧಿಕಾರಿಗಳು ಚುರುಕುಗೊಳ್ಳಬೇಕು ಎಂದು ಡಿಜಿಪಿ ಅಲೋಕ್ ಮೋಹನ್ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.