ನಟ ಯಶ್ ಜನ್ಮದಿನ ಆಚರಣೆಗಾಗಿ ಅವರ ಅಭಿಮಾನಿಗಳು ಬೃಹತ್ ಗಾತ್ರದ ಫ್ಲೆಕ್ಸ್ ಅಳವಡಿಸುವ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ಯುವಕರು ಮೃತಪಟ್ಟಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದ ಅಂಬೇಡ್ಕರ್ ನಗರದ ಯಶ್ ಅಭಿಮಾನಿಗಳು ಭಾನುವಾರ ರಾತ್ರಿ ಬೃಹತ್ ಗಾತ್ರದ ಫ್ಲೆಕ್ಸ್ ಅಳವಡಿಸುವುದಕ್ಕೆ ಮುಂದಾಗಿದ್ದರು. ಈ ಸಂದರ್ಭದಲ್ಲಿ ಕಟೌಟ್ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ವಿದ್ಯುತ್ ಪ್ರವಹಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಲಕ್ಷ್ಮೇಶ್ವರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯ ಮೃತರ ಕುಟುಂಬಕ್ಕೆ ಸರ್ಕಾರದ ಕಡೆಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ. ಮೃತರ ಮನೆಗೆ ಭೇಟಿ ನೀಡಿದ ನಟ ಯಶ್ ಸಾಂತ್ವನ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.