ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆಗೆ ಶ್ರೀಗಂಧವು ಪ್ರಮುಖ ಕಚ್ಚಾ ವಸ್ತುವಾಗಿದ್ದು, ಅದರ ಬೆಳೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್) ಮಹತ್ವದ ಉಪಕ್ರಮವೊಂದನ್ನು ರೂಪಿಸಿದೆ.

ಜತೆಗೆ ಶ್ರೀಗಂಧದ ಮರ, ಗಿಡಗಳ ಕಳ್ಳತನ ತಡೆಯುವುದು ಕೂಡ ದೊಡ್ಡ ಸವಾಲಾಗಿದ್ದು, ಇದರ ತಡೆಗೆ ಯಾರೇ ತಂತ್ರಜ್ಞಾನದ ನೆರವು ನೀಡಿದರೂ ಅದನ್ನು ಸ್ವೀಕರಿಸಲು ಸಂಸ್ಥೆ ಸಿದ್ಧ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

ಈ ಉಪಕ್ರಮದ ಭಾಗವಾಗಿ, ಶ್ರೀಗಂಧ ಕಳ್ಳತನ ತಡೆಗೆ ಸಂಬಂಧಿಸಿದ ಸುಧಾರಿತ ಉಪಕರಣಗಳು ಅಥವಾ ಆಧುನಿಕ ತಂಜ್ಞಾನಗಳ ಮಾಹಿತಿ ಹೊಂದಿರುವ ರೈತರು, ವಿಜ್ಞಾನಿಗಳು ಹಾಗೂ ಸಂಸ್ಥೆಗಳಿಗೆ ಕೆಎಸ್ಡಿಎಲ್ ಅನ್ನು ಸಂಪರ್ಕಿಸಿ ಮಾಹಿತಿ ಹಂಚಿಕೊಳ್ಳುವಂತೆ ಕೋರಲಾಗಿದೆ.

ಸಂಸ್ಥೆಯ ಮುಂದೆ ಇಂತಹ ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ ನೀಡಲು ಅವಕಾಶ ಕಲ್ಪಿಸಲಾಗುವುದು. ಪ್ರಸ್ತಾಪಿತ ಪರಿಹಾರಗಳು ಸೂಕ್ತ ಹಾಗೂ ಪರಿಣಾಮಕಾರಿ ಎಂದು ಕಂಡುಬಂದರೆ, ಅವುಗಳನ್ನು ಪರಿಗಣಿಸಿ ಅನುಷ್ಠಾನಗೊಳಿಸಲಾಗುವುದು. ಆಯ್ಕೆಯಾಗುವ ಯಾವುದೇ ತಂತ್ರಜ್ಞಾನದ ಅನುಷ್ಠಾನಕ್ಕೆ ಬೇಕಾಗುವ ವೆಚ್ಚವನ್ನು ಕೆಎಸ್ಡಿಎಲ್ ಭರಿಸಲಿದೆ ಎಂದು ಪಾಟೀಲ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಕೆಎಸ್ಡಿಎಲ್ ರಾಜ್ಯದ ವಿವಿಧ ಭಾಗಗಳ ರೈತರಿಂದ 174.5 ಟನ್ ಶ್ರೀಗಂಧವನ್ನು ಖರೀದಿಸಿದ್ದು, ಅವರ ಖಾತೆಗಳಿಗೆ ಒಟ್ಟು ₹ 6.08 ಕೋಟಿಯನ್ನು ನೇರ ವರ್ಗಾವಣೆ ಮಾಡಿದೆ ಎಂದು ಪಾಟೀಲ ತಿಳಿಸಿದ್ದಾರೆ.

ಶ್ರೀಗಂಧ ಬೆಳೆ ಉತ್ತೇಜಿಸುವ ಉದ್ದೇಶದಿಂದ ಕೆಎಸ್ಡಿಎಲ್ಗೆ ಅತಿಹೆಚ್ಚು ಪ್ರಮಾಣದಲ್ಲಿ ಶ್ರೀಗಂಧ ಪೂರೈಸಿದ ನಾಲ್ವರು ರೈತರಿಗೆ ಜೂನ್ 4ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸ ಲಾಗುವುದು. ಇದೇ ವೇಳೆ, ಶ್ರೀಗಂಧ ಚೋರರನ್ನು ಬಂಧಿಸುವಲ್ಲಿ ಹಾಗೂ ಪ್ರಕರಣ ದಾಖಲಿಸುವಲ್ಲಿ ಗಮನಾರ್ಹ ಸಾಧನೆ ಮಾಡಿರುವ ಪೊಲೀಸ್ ಸಿಬ್ಬಂದಿ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಈ ಸಂಬಂಧ ಮಹತ್ವದ ಮಾಹಿತಿ ನೀಡಿದ ಸಾರ್ವಜನಿಕರನ್ನು ಪುರಸ್ಕರಿಸ ಲಾಗುವುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-51-1814742925

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.