ಬೆಂಗಳೂರು: ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194ನೇ ಸ್ಮರಣೋತ್ಸವ ಅಂಗವಾಗಿ ನಗರದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿರುವ ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಅವರು ಮಾತನಾಡಿದರು.

‘ಕಿತ್ತೂರು ರಾಣಿ ಚನ್ನಮ್ಮನವರ ಬಲಗೈ ಬಂಟನಾಗಿ ಹೋರಾಡಿದ ಸಂಗೊಳ್ಳಿ ರಾಯಣ್ಣನವರು ಅಪ್ರತಿಮ ದೇಶಭಕ್ತರಾಗಿದ್ದರು. ಬ್ರಿಟಿಷರ ವಿರುದ್ಧ ಸೆಣಸಲು ಗೆರಿಲ್ಲಾ ಯುದ್ಧ ತಂತ್ರಗಾರಿಕೆಯನ್ನು ಬಳಸಿದ್ದರು. ಭಾರತದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಸಂಗೊಳ್ಳಿ ರಾಯಣ್ಣನವರು ಕನ್ನಡ ನಾಡು–ನುಡಿ, ನೆಲ, ಜಲಕ್ಕೆ ಅತೀವ ಗೌರವ ನೀಡುತ್ತಿದ್ದರು. ಅವರ ಬದುಕು ನಮಗೆಲ್ಲ ಸ್ಫೂರ್ತಿ’ ಎಂದರು.

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪದ್ಮಾವತಿ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣ ಗೌಡ, ಮಾಜಿ ಮೇಯರ್ಗಳಾದ ಜೆ. ಹುಚ್ಚಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.