ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ (2025–26) ಸರ್ಕಾರಿ, ಅನುದಾನಿತ ಶಾಲೆಗಳು, ಕಾಲೇಜುಗಳು ಮತ್ತು ಹಾಸ್ಟೆಲ್ಗಳ ಹದಿಹರೆಯದ 19.64 ಲಕ್ಷ ಹೆಣ್ಣು ಮಕ್ಕಳಿಗೆ ‘ಶುಚಿ’ ಕಾರ್ಯಕ್ರಮದಡಿ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ಗಳನ್ನು ಖರೀದಿಸಿ, ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಉದ್ದೇಶಕ್ಕೆ ₹ 71.83 ಕೋಟಿ ಅನುದಾನದ ಅಗತ್ಯವಿದೆ ಎಂದು ಆರೋಗ್ಯ ಇಲಾಖೆಯು ಸಚಿವ ಸಂಪುಟ ಸಭೆಗೆ ಪ್ರಸ್ತಾವ ಮಂಡಿಸಿದೆ.

ಪ್ರತಿ ಫಲಾನುಭವಿಗೆ ತಿಂಗಳಿಗೆ ಒಂದು ಯುನಿಟ್ನಂತೆ (ತಲಾ 10 ಪ್ಯಾಡ್ಗಳು) 12 ತಿಂಗಳ ಅವಧಿಗೆ 2.35 ಕೋಟಿ ಯುನಿಟ್ ಸ್ಯಾನಿಟರಿ ನ್ಯಾಪ್ಕಿನ್ಗಳ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಲೆಕ್ಕ ಹಾಕಿದೆ.

ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ (ಕೆಎಸ್ಎಂಎಸ್ಸಿಎಲ್) ನೀಡಿದ ಅಂದಾಜಿನ ಪ್ರಕಾರ ಪ್ರತಿ ಯುನಿಟ್ಗೆ ₹ 30.47 ವೆಚ್ಚ ಆಗಲಿದೆ. ಕೆಎಸ್ಎಂಎಸ್ಸಿಎಲ್ ಮೂಲಕ ಕೆಟಿಪಿಪಿ ಕಾಯ್ದೆಯ ಪ್ರಕಾರ ನಿಯಮಗಳನ್ನು ಅನ್ವಯಿಸಿ ಒಟ್ಟು ₹ 71.83 ಕೋಟಿ ಅನುದಾನದಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ಖರೀದಿಸಿ ವಿತರಿಸಲು ಪ್ರಸ್ತಾಪಿಸಲಾಗಿದೆ.

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ಸರ್ಕಾರಿ, ಅನುದಾನಿತ ಮತ್ತು ವಸತಿಶಾಲೆಗಳಲ್ಲಿ ದಾಖಲಾಗಿರುವ ಎಲ್ಲ ಬಾಲಕಿಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ ಒದಗಿಸುವ ಉದ್ದೇಶದಿಂದ ಮುಟ್ಟಿನ ನೈರ್ಮಲ್ಯ ಯೋಜನೆ ‘ಶುಚಿ’ಯನ್ನು 2013–14ನೇ ಸಾಲಿನಲ್ಲಿ ಆರಂಭಿಸಲಾಗಿತ್ತು. ಆದರೆ, ಕೋವಿಡ್ ನಂತರ ಯೋಜನೆ ಸ್ಥಗಿತಗೊಂಡಿತ್ತು. ಕಳೆದ ವರ್ಷ ಮತ್ತೆ ಈ ಯೋಜನೆಗೆ ಚಾಲನೆ ನೀಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.