ಬೆಂಗಳೂರು: ‘ಭಾರತದ ಪ್ರಾಚೀನ ಜ್ಞಾನ ಪರಂಪರೆಯನ್ನು ಆಧುನಿಕ ತಂತ್ರಜ್ಞಾನದೊಟ್ಟಿಗೆ ಜೋಡಿಸುವ ಅಗತ್ಯವಿದೆ. ಆ ಮೂಲಕ ಸಂಸ್ಕೃತದ ಶ್ರೀಮಂತ ಪರಂಪರೆಯನ್ನು ಅಜರಾಮರವಾಗಿಸಬೇಕು’ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಭಿಪ್ರಾಯಪಟ್ಟರು.

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ 12 ಮತ್ತು 13ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.

‘ಸಂಸ್ಕೃತದಲ್ಲಿ ಇರುವ ಜ್ಞಾನಪರಂಪರೆಯನ್ನು ಡಿಜಿಟಲ್ ಸ್ವರೂಪದಲ್ಲಿ ದಾಖಲಿಸುವ ಅಗತ್ಯವಿದೆ. ಹಲವು ಭಾಷೆಗಳಿಗೆ ಸಂಸ್ಕೃತವು ಜನನಿಯಾಗಿದೆ. ಜಗತ್ತು ಈಗ ಪರಿಸರ ಸಮಸ್ಯೆ ಮತ್ತು ನೈತಿಕ ಮೌಲ್ಯಗಳ ಕುಸಿತದ ಅಪಾಯದಲ್ಲಿವೆ. ಸಂಸ್ಕೃತದಲ್ಲಿರುವ ಜ್ಞಾನ ಪರಂಪರೆಯಲ್ಲಿ ಈ ಸಮಸ್ಯೆಗಳಿಗೆ ಪರಿಹಾರವಿದೆ. ವಿಕಸಿತ ಭಾರತ ಗುರಿ ಸಾಧನೆಗೆ ಇದರಿಂದ ನೆರವಾಗಲಿದೆ. ಯುವ ಸಮೂಹವು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು’ ಎಂದರು.

ಸಂಸದ ಡಾ.ಸಿ.ಎನ್.ಮಂಜುನಾಥ್, ‘ಕನ್ನಡವನ್ನೂ ಒಳಗೊಂಡು ಹಲವು ಭಾಷೆಗಳ ಮೇಲೆ ಸಂಸ್ಕೃತದ ಪ್ರಭಾವ ಇದೆ. ಸಂಸ್ಕೃತ ಕೇವಲ ಒಂದು ಭಾಷೆ ಅಲ್ಲ. ಅದು ನಮ್ಮ ನೈತಿಕ ಮೌಲ್ಯ, ಸಿದ್ಧಾಂತ, ಸಾಂಸ್ಕೃತಿಕ ಪರಂಪರೆಯ ಪ್ರತಿಬಿಂಬ. ಸಂಸ್ಕೃತ ಭಾಷೆಯಲ್ಲಿ ಜ್ಞಾನ ಸಂಪತ್ತು ಅಡಗಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದರು.

ವಿ.ವಿ ಕುಲಪತಿ ಪ್ರೊ. ಅಹಲ್ಯಾ ಎಸ್.,‘ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಡಿಜಿಟಲ್ ಗ್ರಂಥಾಲಯ, ತಾಂಡು ಲಿಪಿ ಸಂರಕ್ಷಣೆ, ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಕುರಿತ ತರಬೇತಿ ಒಳಗೊಂಡು ಅಂತರರಾಷ್ಟ್ರೀಯ ಸಂಸ್ಥೆಗಳ ಸಹಯೋಗದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-4-1482940908

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.