ಬೆಂಗಳೂರು: ಕೋವಿಡ್‌ನಿಂದಾಗಿ ಸ್ಥಗಿತಗೊಳಿಸಿದ್ದ ‘ಸಪ್ತಪದಿ’ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಮರುಚಾಲನೆ ನೀಡಲು ಮುಜರಾಯಿ ಇಲಾಖೆ ತೀರ್ಮಾನಿಸಿದ್ದು, ಇದೇ 15 ಮತ್ತು 20 ರಂದು ರಾಜ್ಯದಾದ್ಯಂತ ಸಪ್ತಪದಿ ಕಾರ್ಯಕ್ರಮ ನಡೆಯಲಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಫೆಬ್ರುವರಿ 17 ಮತ್ತು 27 ರಂದು ರಾಜ್ಯಮಟ್ಟದಲ್ಲಿ ನಡೆಯಲಿದೆ. ಅಲ್ಲದೆ, ಇನ್ನು ಮುಂದೆ ಪ್ರತಿ ತಿಂಗಳೂ ಸಪ್ತಪದಿ ಕಾರ್ಯಕ್ರಮ ಜಿಲ್ಲಾ ಮಟ್ಟದಲ್ಲಿ ನಡೆಯಲಿದೆ. ಆಗಮ ಪಂಡಿತರು ದಿನಾಂಕ ನಿಗದಿ ಮಾಡುತ್ತಾರೆ ಎಂದು ಹೇಳಿದರು.

ವಧುವಿಗೆ ₹40 ಸಾವಿರ ಮೌಲ್ಯದ ಮಾಂಗಲ್ಯವನ್ನು ನೀಡಲಾಗುವುದು. ಕಾವೇರಿ ಎಂಪೋರಿಯಂ ಮೂಲಕ ಮಾಂಗಲ್ಯ ಖರೀದಿಸಲು ತೀರ್ಮಾನಿಸಲಾಗಿದೆ.

ಇ–ಆಡಳಿತ ಜಾರಿ:
ಇನ್ನು ಮುಂದೆ ಮುಜರಾಯಿ ಆಡಳಿತ ಇ–ಆಡಳಿತವಾಗಿ ಮಾರ್ಪಡಲಿದೆ. ಕಡತ ವಿಲೇವಾರಿ ಮತ್ತು ಕಾಗದ ಪತ್ರಗಳ ವ್ಯವಹಾರ ಡಿಜಿಟಲ್ ರೂಪದಲ್ಲಿ ನಡೆಯಲಿದೆ. ಇದರಿಂದ ಆಡಳಿತದಲ್ಲಿ ಪಾರದರ್ಶಕತೆಯ ಜತೆಗೆ ಆಡಳಿತಕ್ಕೆ ಚುರುಕೂ ಸಿಗುತ್ತದೆ ಎಂದು ಸಚಿವರು ಹೇಳಿದರು.

ಇದರಿಂದಾಗಿ ಯಾವುದೇ ಕಡತಗಳು ಬಾಕಿ ಉಳಿಯುವ ಪ್ರಶ್ನೆಯೇ ಇಲ್ಲ. ರಾಜ್ಯದ ಯಾವುದೇ ಮೂಲೆಯಿಂದ ಒಂದು ಬಟನ್ ಕ್ಲಿಕ್ ಮಾಡಿದರೆ ಸಾಕು ಕಡತಗಳು ರವಾನೆ ಆಗುತ್ತವೆ. ತಕ್ಷಣವೇ ಅವುಗಳನ್ನು ಪರಿಶೀಲಿಸಬಹುದು. ಕಡತಗಳ ಕಾಣೆ ಆಗುವುದನ್ನು ತಪ್ಪಿಸಲು ಇದರಿಂದ ಸಾಧ್ಯ ಎಂದು ಅವರು ಹೇಳಿದರು.

ನಾಳೆ ಒಂದು ದಿನದ ಕಾರ್ಯಾಗಾರ:ಜಿಲ್ಲಾ ಮಟ್ಟದ ಧಾರ್ಮಿಕ ಪರಿಷತ್ ಸದಸ್ಯರಿಗೆ ಗುರುವಾರ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಧರ್ಮಸ್ಥದ ಡಿ.ವಿರೇಂದ್ರ ಹೆಗ್ಗಡೆ, ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ ಗುರೂಜಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಈ ಕಾರ್ಯಾಗಾರದಲ್ಲಿ ಮುಖ್ಯವಾಗಿ, ದೇವಸ್ಥಾನಗಳಲ್ಲಿ ಪೂಜಾ ಪದ್ಧತಿ, ಆಡಳಿತ, ಸ್ವಚ್ಛತೆ ಕಾಪಾಡುವ ಕುರಿತು ತಜ್ಞರು ಮಾತನಾಡಲಿದ್ದಾರೆ ಎಂದು ಶ್ರೀನಿವಾಸ ಪೂಜಾರಿ ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.