ನವದೆಹಲಿ: ಮೊದಲ ಬಾರಿ ಶಾಸಕರಾದವರು ಸಚಿವರಾಗಲಿ. ಅದರಲ್ಲಿ ತಪ್ಪೇನಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪ್ರಶ್ನಿಸಿದರು.

ಬುಧವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಮೊದಲ ಬಾರಿಗೆ ಶಾಸಕರಾದವರನ್ನು ಬಿಜೆಪಿ ಮುಖ್ಯಮಂತ್ರಿ ಮಾಡಿದೆ. ದೇವರಾಜ ಅರಸು ಸೇರಿದಂತೆ ಬೇರೆ ಬೇರೆ ಕಾಲಘಟ್ಟದಲ್ಲಿ ಮೊದಲ ಬಾರಿಗೆ ಶಾಸಕರಾದವರು ಸಚಿವರಾಗಿದ್ದಾರೆ. ಸಾಮರ್ಥ್ಯ ಹಾಗೂ ಅರ್ಹತೆ ಇದ್ದವರಿಗೆ ಕೊಡುವುದರಲ್ಲಿ ತಪ್ಪೇನಿದೆ’ ಎಂದರು.

ಮೊದಲ ಬಾರಿ ಶಾಸಕರಾದವನ್ನು ಸಚಿವರನ್ನಾಗಿ ಮಾಡುವುದಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಬದಲಾವಣೆ ಏಕೆ ಆಗಬಾರದು. ಅದೇನು ಸುಪ್ರೀಂ ಕೋರ್ಟ್ ಆದೇಶ ಅಲ್ಲ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.