ದಾವಣಗೆರೆ: ವೈಯಕ್ತಿವಾಗಿ ನನಗೆ ಹೋಮ-ಹವನದ ಬಗ್ಗೆ ಆಸಕ್ತಿ ಇಲ್ಲ. ಅವರಿಗೆ ಇಷ್ಟವಾದ್ದರಿಂದ ಅವರು ಮಾಡಿಕೊಂಡಿದ್ದಾರೆ. ನಾನು ಬೇರೆ ಕೆಲಸದ ನಿಮಿತ್ತ ಅಲ್ಲಿಗೆ ಹೋಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡೆಸಿದ ಹೋಮಕ್ಕೆ ತೆರಳದೇ ಇರುವುದರ ಬಗ್ಗೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರ ತಾಂಡದಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ವಿಧಾನ ಪರಿಷತ್ ಸದಸ್ಯರ ಆಯ್ಕೆಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಆದ್ಯತೆ ನೀಡಲು ಚಿಂತನೆ ನಡೆದಿದೆ ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ಪದಗ್ರಹಣಕ್ಕೂ ಮುನ್ನ ಹೋಮ

ಈಗಾಗಲೇ ಬಿಜೆಪಿಯಲ್ಲಿ ಮೂರು ಗುಂಪುಗಳಾಗಿವೆ. ಈಗ ಮತ್ತೆ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಹೋಗುವುದಾಗಿ ಹೇಳಿದ್ದಾರೆ. ಇನ್ನೊಂದು ಗುಂಪು ಮಾಡುವ ಪ್ರಯತ್ನ ಇರಬಹುದು ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.