ಹೊಸದುರ್ಗ: ‘ಕುಂಚಿಟಿಗ ಸಮಾಜದ ಕುಲಶಾಸ್ತ್ರೀಯ ಅಧ್ಯಯನ ಪೂರ್ಣಗೊಂಡಿದೆ. ಆದರೆ ಸರ್ಕಾರ ಕುಂಚಿಟಿಗರಿಗೆ ಪ್ರವರ್ಗ-1 ಅಥವಾ 2 ‘ಎ’ ಮೀಸಲಾತಿ ಸೌಲಭ್ಯ ಕಲ್ಪಿಸುತ್ತಿಲ್ಲ. ಈ ಸೌಲಭ್ಯ ಪಡೆಯಲು ಸತ್ಯಾಗ್ರಹ ಆರಂಭಿಸಲಾಗುವುದು’ ಎಂದು ಇಲ್ಲಿನ ಕುಂಚಿಟಿಗ ಮಹಾಸಂಸ್ಥಾನದ ಶಾಂತವೀರ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಮಧುಗಿರಿ ತಾಲ್ಲೂಕಿನ ಹೊಸಕೆರೆ ಗ್ರಾಮದಲ್ಲಿ ಮಾತನಾಡಿದರು.

‘ಕೆಲವು ಪ್ರಭಾವಿ ಜಾತಿಗಳು ಮತ್ತು ರಾಜಕೀಯ ವ್ಯಕ್ತಿಗಳು ಅವರ ಜನಸಂಖ್ಯೆ ತೋರಿಸಲು ಕುಂಚಿಟಿಗರನ್ನು ಬಳಸಿಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಕುಂಚಿಟಿಗ ಸಮಾಜದ ಸಂಘಟನೆಗಾಗಿ ಶ್ರೀಮಠವನ್ನು 23 ವರ್ಷಗಳ ಹಿಂದೆಯೇ ಸ್ಥಾಪಿಸಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವರು ಸಮಾಜದ ಯುವಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ’ ಎಂದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.