ನವದೆಹಲಿ: ರಾಜ್ಯಸಭಾ ಸದಸ್ಯ ಸಯ್ಯದ್ ನಾಸಿರ್ ಹುಸೇನ್ ಅವರನ್ನು ಜಮ್ಮು ಮತ್ರು ಕಾಶ್ಮೀರದ ಪ್ರಧಾನ ಕಾರ್ಯದರ್ಶಿಯಾಗಿಎಐಸಿಸಿ ಶನಿವಾರ ನೇಮಿಸಿದೆ.

ಹರಿಯಾಣ ರಾಜ್ಯದ ಪಕ್ಷದ ಉಸ್ತುವಾರಿಯಾಗಿ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಿಸಲಾಗಿದೆ.

ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಪಕ್ಷದ ಸಂಘಟನೆಯ ಪುನರ್ ರಚನೆ ಪ್ರಕ್ರಿಯೆಗೆ ಪಕ್ಷ ಚಾಲನೆ ನೀಡಿದೆ. ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರಿಗೂ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.ಹರಿಪ್ರಸಾದ್ ಅವರು ದಶಕಗಳ ಕಾಲ ರಾಷ್ಟ್ರ ರಾಜಕಾರಣದಲ್ಲಿದ್ದು ಹಲವು ರಾಜ್ಯಗಳ ಉಸ್ತುವಾರಿಗಳಾಗಿ ಕಾರ್ಯನಿರ್ವಹಿಸಿದ್ದರು. ಮೂರು ವರ್ಷಗಳ ಹಿಂದೆ ರಾಜ್ಯ ರಾಜಕಾರಣಕ್ಕೆ ಬಂದಿದ್ದರು. ರಾಷ್ಟ್ರ ರಾಜಕಾರಣದಲ್ಲಿ ಅವರ ಅನುಭವವನ್ನು ಮತ್ತೆ ಬಳಸಿಕೊಳ್ಳಲು ಪಕ್ಷ ತೀರ್ಮಾನಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.