ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಪರಿಶಿಷ್ಟ ಜಾತಿಯವರ ಪೈಕಿ ಯಾರಾದರೂ ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದರೆ, ಅಂಥವರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವಂತೆ ರಾಜ್ಯ ಸರ್ಕಾರ ಮತ್ತೊಮ್ಮೆ ಆದೇಶ ಹೊರಡಿಸಿದೆ.

ಕೇಂದ್ರ ಸರ್ಕಾರ 1990ರ ನ. 20ರಂದು ಬರೆದ ಪತ್ರದಲ್ಲಿದ್ದ ಸೂಚನೆಯಂತೆ, ‘ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಪರಿಶಿಷ್ಟ ಜಾತಿಯವರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವಂತೆ ಮತ್ತು ಧರ್ಮದ ಕಾಲಂನಲ್ಲಿ ಬೌದ್ದ ಧರ್ಮ ಎಂದು ನಮೂದಿಸುವಂತೆ ಜಾತಿ ಪ್ರಮಾಣಪತ್ರ ನೀಡುವ ಪ್ರಾಧಿಕಾರಿಗಳಿಗೆ ರಾಜ್ಯ ಸರ್ಕಾರ 2013ರ ಡಿ. 9ರಂದೇ ಆದೇಶ ನೀಡಿತ್ತು.

ಆದರೆ, ಹೀಗೆ ಮತಾಂತರಗೊಂಡವರಿಗೆ ಜಾತಿ ಪ್ರಮಾಣಪತ್ರ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಿ ಆದೇಶ ಹೊರಡಿಸುವಂತೆ ಸಮಾಜ ಕಲ್ಯಾಣ ಇಲಾಖೆಗೆ ಹಲವು ಸಂಘಸಂಸ್ಥೆಗಳು ಮನವಿ ಸಲ್ಲಿಸಿದ್ದವು.

ಈ ಕಾರಣಕ್ಕೆ ಮತ್ತೆ ಆದೇಶ ಹೊರಡಿಸಿರುವ ಇಲಾಖೆ, ‘ಪರಿಶಿಷ್ಟ ಜಾತಿಯಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಂಡವರು ಜಾತಿ ಪ್ರಮಾಣಪತ್ರ ಪಡೆಯಲು ಸಲ್ಲಿಸುವ ಅರ್ಜಿಗಳಲ್ಲಿ ಧರ್ಮದ ಕಾಲಂನಲ್ಲಿ ‘ಬೌದ್ಧ’ (ಬುದ್ಧಿಸಂ) ಎಂದು ನಮೂದಿಸಲು ಅವಕಾಶ ಕಲ್ಪಿಸಬೇಕು. ಅರ್ಜಿದಾರರು ಅಥವಾ ಪೋಷಕರು ಇಚ್ಚಿಸಿದರೆ ಶಾಲಾ ಶಿಕ್ಷಣ ಇಲಾಖೆಯ ಅಡಿಯಲ್ಲಿರುವ ಸರ್ಕಾರಿ, ಖಾಸಗಿ ಶಾಲೆಗಳು ಮತ್ತು ಇತರ ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿನ ದಾಖಲೆಗಳಲ್ಲಿ ಧರ್ಮದ ಕಾಲಂನಲ್ಲಿಯೂ ಬೌದ್ಧ ಎಂದು ನಮೂದಿಸಲು ಅವಕಾಶ ನೀಡಬೇಕು. ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು ನಿಗಮ ಮಂಡಳಿಗಳು, ಇತರ ಸಂಸ್ಥೆಗಳು ಈ ಆದೇಶದಂತೆ ಕ್ರಮ ವಹಿಸಬೇಕು’ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.