ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಪರಿಹಾರ ಬಿಡುಗಡೆಗೆ ಸಮ್ಮತಿ | ಕರ್ನಾಟಕದ ಹೋರಾಟಕ್ಕೆ ಜಯ: ಡಿ.ಕೆ. ಶಿವಕುಮಾರ್

Published 22 ಏಪ್ರಿಲ್ 2024, 13:51 IST
Last Updated 22 ಏಪ್ರಿಲ್ 2024, 13:51 IST
ಅಕ್ಷರ ಗಾತ್ರ

ಚನ್ನಪಟ್ಟಣ (ರಾಮನಗರ): ‘ಬರ ಪರಿಹಾರದ ವಿಚಾರದಲ್ಲಿ ಕರ್ನಾಟಕದ ಹೋರಾಟಕ್ಕೆ ಜಯ ಸಿಕ್ಕಿದೆ. ನಮ್ಮ ಪಾಲಿನ ಹಣ ನಮಗೆ ಸಿಗಲೇಬೇಕು ಎಂದು ಕೋರ್ಟ್ ಮೊರೆ ಹೋಗಿದ್ದೆವು. ಅದರಂತೆ ನ್ಯಾಯ ಸಿಕ್ಕಿದೆ. ನಮ್ಮ ಪಾಲಿನ ತೆರಿಗೆ ಮತ್ತು ಬರ ಪರಿಹಾರ ಸಿಗಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಸ ವ್ಯಕ್ತಪಡಿಸಿದರು.

ನಗರದಲ್ಲಿ ಈ ಕುರಿತು ಸೋಮವಾರ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಸಂಸದ ಡಿ.ಕೆ. ಸುರೇಶ್ ಅವರು ದನಿ ಎತ್ತಿದ್ದರು. ಈ ಕುರಿತು ನಾವೆಲ್ಲರೂ ಸೇರಿ ನಡೆಸಿದ ಹೋರಾಟದಿಂದಾಗಿ, ನಮಗೆ ನ್ಯಾಯ ಸಿಕ್ಕಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT