ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹಿಸಲು ರಾಜ್ಯದಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯ ಅವಧಿಯನ್ನು ಇದೇ 30ರವರೆಗೆ ವಿಸ್ತರಿಸಲಾಗಿದೆ.

ಮೇ 5ರಿಂದ ಮನೆ ಮನೆ ಸಮೀಕ್ಷೆ ಆರಂಭಗೊಂಡಿತ್ತು. ಈವರೆಗೆ ರಾಜ್ಯದಾದ್ಯಂತ ಸಮೀಕ್ಷೆಯಲ್ಲಿ ಶೇ 91 ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ 50ರಷ್ಟು ಪ್ರಗತಿ ಆಗಿದೆ. ಸಮೀಕ್ಷೆಯಲ್ಲಿ ಭಾಗವಹಿಸದೇ ಇರುವ ಕುಟುಂಬಗಳಿಗೆ ಅಂತಿಮ ಅವಕಾಶ ಕಲ್ಪಿಸುವ ಉದ್ದೇಶದಿಂದ ಸಮೀಕ್ಷೆಯ ಕೊನೆಯ ದಿನಾಂಕವನ್ನು ಇದೇ 23ರಿಂದ 30ರವರೆಗೆ ವಿಸ್ತರಿಸಲಾಗಿದೆ ಎಂದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ದಾಸ್ ನೇತೃತ್ವದ ಏಕ ಸದಸ್ಯ ಆಯೋಗ ತಿಳಿಸಿದೆ.

ನಾಗರಿಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಮೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ 198 ವಾರ್ಡ್ಗಳಲ್ಲೂ ಪ್ರತ್ಯೇಕ ಶಿಬಿರಗಳನ್ನು ತೆರೆಯಲಾಗಿದೆ. ಅಲ್ಲದೆ, ಆನ್ಲೈನ್ (https://schedulecastesurvey.karnataka.gov.in/selfdeclaration) ಲಿಂಕ್ ಮೂಲಕವೂ ಸ್ವಯಂಘೋಷಣೆ ಮಾಡಿಕೊಳ್ಳಬಹುದು ಎಂದು ಆಯೋಗ ತಿಳಿಸಿದೆ. ಈ ಕುರಿತಂತೆ ಎಲ್ಲ ಜಿಲ್ಲಾಧಿಕಾರಿಗಳು, ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ವಲಯ ಆಯುಕ್ತರಿಗೆ ಆಯೋಗ ಪತ್ರ ಬರೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.