ಬೆಂಗಳೂರು: ಪರಿಶಿಷ್ಟ ಜಾತಿಗೆ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ದಾಸ್ ಆಯೋಗ ನೀಡಿರುವ ವರದಿಯನ್ನು ಗುರುವಾರ ನಡೆದ ಸಚಿವ ಸಂಪುಟ ಸಭೆ ಸ್ವೀಕರಿಸಿದ್ದು, ಈ ವರದಿಯ ಬಗ್ಗೆ ಇದೇ ಆ. 16 ರಂದು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಎಚ್. ಕೆ. ಪಾಟೀಲ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ನಾಗಮೋಹನ್ದಾಸ್ ಅವರು ಶ್ರಮವಹಿಸಿ, ಅತಿ ಕಡಿಮೆ ಅವಧಿಯಲ್ಲಿ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ನೀಡಿದ್ದಾರೆ. ಈ ಸಮುದಾಯಗಳ ಶೇ 92 ರಷ್ಟು ಜನರ ಸಮೀಕ್ಷೆ ಮಾಡಲಾಗಿದೆ. ಈ ವರದಿಯ ಪ್ರತಿಗಳನ್ನು ಸಚಿವ ಸಂಪುಟದ ಎಲ್ಲ ಸದಸ್ಯರಿಗೂ ವಿತರಿಸಲಾಗಿದೆ. ವಿಶೇಷ ಸಂಪುಟ ಸಭೆಗೆ ಎಲ್ಲರೂ ಓದಿಕೊಂಡು ಬಂದು ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
.ಒಳಮೀಸಲಾತಿ: ತರಾತುರಿಯಲ್ಲಿ ಜಾರಿಗೊಳಿಸಬೇಡಿ; ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ .ಒಳಮೀಸಲಾತಿ ಜಾರಿಗೆ ಬೆಂಗಳೂರು ಚಲೋ 18ರಂದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.