ಸಮೀಕ್ಷೆಗೆ ಮೊಬೈಲ್ ಆ್ಯಪ್ ಬಳಕೆ
ಮೊಬೈಲ್ ಆ್ಯಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30ರಿಂದ ಸಂಜೆ 6:30ರವರೆಗೆ ಮೊಬೈಲ್ ಆ್ಯಪ್ ಬಳಸಬಹುದು. ಸ್ವಯಂ ಘೋಷಣೆಗೆ ಆಧಾರ್ ನಂಬರ್ ಮತ್ತು ಜಾತಿ ಪ್ರಮಾಣಪತ್ರದ ಆರ್.ಡಿ. ಸಂಖ್ಯೆ ಕಡ್ಡಾಯವಾಗಿದೆ. ವಲಸೆ ಹೋಗಿರುವ ಸುಮುದಾಯಗಳು ಆನ್‌ಲೈನ್ ಸೌಲಭ್ಯ ಬಳಸಿಕೊಳ್ಳಬೇಕು. ಸಮೀಕ್ಷೆ ಕುರಿತು ವಿವಿಧ ಸಂಘಟನೆಗಳು ನೆರವಾಗಬೇಕು. ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಎಲ್ಲರೂ ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ನೀಡಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.