ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಂಜಾನ್‌ ಉಪವಾಸ: ಉರ್ದು ಶಾಲಾ ಸಮಯ ಬದಲಾವಣೆ

Published 8 ಮಾರ್ಚ್ 2024, 13:17 IST
Last Updated 8 ಮಾರ್ಚ್ 2024, 13:17 IST
ಅಕ್ಷರ ಗಾತ್ರ

ಬೆಂಗಳೂರು: ರಂಜಾನ್‌ ಉಪವಾಸ ಮಾರ್ಚ್ 11ರಿಂದ ಆರಂಭವಾಗುತ್ತಿದ್ದು, ಪ್ರತಿ ವರ್ಷದಂತೆ ಈ ಬಾರಿಯೂ ಉರ್ದು ಶಾಲೆಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.

ರಂಜಾನ್‌ನ ಒಂದು ತಿಂಗಳು ಪ್ರತಿ ದಿನ ಉರ್ದು ಶಾಲೆಗಳು ಬೆಳಿಗ್ಗೆ 8ರಿಂದ ಮಧ್ಯಾಹ್ನ 12.45ವರೆಗೆ ನಡೆಯಲಿವೆ. ಒಂದು ತಿಂಗಳು ಕಡಿತವಾಗುವ ಶಾಲಾ ಸಮಯವನ್ನು ಮುಂದಿನ ರಜಾ ದಿನಗಳಲ್ಲಿ ವಿಶೇಷ ತರಗತಿ ನಡೆಸುವ ಮೂಲಕ ಸರಿದೂಗಿಸಲು, ಇತರೆ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಲ್ಲಿನ ಮುಸ್ಲಿಂ ವಿದ್ಯಾರ್ಥಿಗಳಿಗೆ ಶಾಲಾ ಸಮಯಕ್ಕೂ ಅರ್ಧ ಗಂಟೆ ಮುಂಚಿತವಾಗಿ ಮನೆಗಳಿಗೆ ತೆರಳಲು ಅವಕಾಶ ಮಾಡಿಕೊಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT