ಬೆಂಗಳೂರು: ‘ರಾಜ್ಯದ ಶಾಲೆಗಳಲ್ಲಿಈ ವೇಳೆಗೆ 10 ಲಕ್ಷ ವಿದ್ಯಾರ್ಥಿಗಳು ದಾಖಲಾಗಬೇಕಿತ್ತು. ಆದರೆ ಕೊರೊನಾ ಸೋಂಕಿನ ಕಾರಣದಿಂದಾಗಿ ಅದು ಸಾಧ್ಯವಾಗಿಲ್ಲ. ಯಾವುದೇ ದಾಖಲೆಗಳನ್ನು ಅಪೇಕ್ಷಿಸದೇ ಮಕ್ಕಳನ್ನು ಶಾಲೆಗೆ ದಾಖಲಿಸಿಕೊಳ್ಳಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಸೂಚಿಸಿದರು.

ಇಲಾಖೆಯ ಅಧಿಕಾರಿಗಳೊಂದಿಗೆ ಶುಕ್ರವಾರ ವಿಡಿಯೊ ಸಂವಾದ ನಡೆಸಿದ ಅವರು, ‘ ಯಾವ ದಿನವೇ ಆಗಲಿ, ಶಾಲೆ ಸೇರಲು ಬರುವ ಮಕ್ಕಳನ್ನು ಮೊದಲು ದಾಖಲಿಸಿಕೊಳ್ಳಬೇಕು. ಆ.10ರಿಂದ 15ರವರೆಗೆ ಮಕ್ಕಳ ಶಾಲಾ ದಾಖಲಾತಿಯು ಆಂದೋಲನದ ಮಾದರಿಯಲ್ಲಿ ನಡೆಯಬೇಕು’ ಎಂದು ಅವರು ಹೇಳಿದರು.

‘ಈಗಾಗಲೇ ಶಾಲಾ ಮಕ್ಕಳಿಗೆ ಪುಸ್ತಕ, ನೋಟ್ಬುಕ್ಗಳನ್ನು ಒದಗಿಸಲಾಗಿದೆ. ಇನ್ನೂ ಅಗತ್ಯವಿರುವವರು ತಮ್ಮ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸಿ ಪುಸ್ತಕಗಳನ್ನು ಪಡೆಯಬಹುದು’ ಎಂದು ಶಿಕ್ಷಕರಿಗೆ ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.