ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಾಲಾಬ್ಯಾಗ್‌ ಭಾರ ತಗ್ಗಿಸಲು ಪಠ್ಯಪುಸ್ತಕ ವಿಂಗಡಣೆ

Published 18 ಡಿಸೆಂಬರ್ 2023, 16:19 IST
Last Updated 18 ಡಿಸೆಂಬರ್ 2023, 16:19 IST
ಅಕ್ಷರ ಗಾತ್ರ

ಬೆಂಗಳೂರು: ಶಾಲಾ ಮಕ್ಕಳ ಬ್ಯಾಗ್‌ ಹೊರೆ ತಗ್ಗಿಸುವುದಕ್ಕಾಗಿ ಪ್ರತಿ ಪಠ್ಯಪುಸ್ತಕವನ್ನೂ ಎರಡು ಭಾಗಗಳಾಗಿ ವಿಂಗಡಿಸಿ, ಮುದ್ರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ.

ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ನಂತರ ಕರ್ನಾಟಕ ಪಠ್ಯಪುಸ್ತಕ ಸಂಘ ಈ ಕುರಿತು ಆದೇಶ ಹೊರಡಿಸಿದ್ದು, ಇನ್ನು ಮುಂದೆ ಪ್ರತಿ ವಿಷಯದ ಪಠ್ಯಪುಸ್ತಕವೂ ಸೆಮಿಸ್ಟರ್‌–1, ಸೆಮಿಸ್ಟರ್‌–2 ಎಂದು ಮುದ್ರಣವಾಗಲಿದೆ ಎಂದು ಹೇಳಿದೆ.

ಶಾಲಾ ಆಡಳಿತ ಮಂಡಳಿಗಳ ವಿರೋಧ

ಕರ್ನಾಟಕ ಪಠ್ಯಪುಸ್ತಕ ಸಂಘ ಆದೇಶಕ್ಕೆ ಖಾಸಗಿ ಶಾಲಾ ಆಡಳಿತ ಮಂಡಳಿಗಳು, ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಪಠ್ಯಪುಸ್ತಕಗಳ ಖರೀದಿಗೆ ಹೆಚ್ಚಿನ ಹಣ ವಿನಿಯೋಗಿಸಬೇಕಾಗುತ್ತದೆ. ನೋಟ್‌ಪುಸ್ತಕಗಳ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತದೆ. ಪುಸ್ತಕಗಳನ್ನು ವಿಭಜಿಸುವುದು ಬ್ಯಾಗ್ ಭಾರದ ಸಮಸ್ಯೆಗೆ ಪರಿಹಾರವಲ್ಲ’ ಎಂದು ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT