ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಲ್ಲ ತರಗತಿಗಳಿಗೂ ಮತ್ತೆ ಮೌಲ್ಯಾಂಕನ ಜಾರಿ

Published 2 ಜುಲೈ 2024, 16:26 IST
Last Updated 2 ಜುಲೈ 2024, 16:26 IST
ಅಕ್ಷರ ಗಾತ್ರ

ಬೆಂಗಳೂರು: 5, 8 ಹಾಗೂ 9ನೇ ತರಗತಿಗಳ ಬೋರ್ಡ್‌ ಪರೀಕ್ಷೆಗಳನ್ನು ಕೋರ್ಟ್‌ ರದ್ದು ಮಾಡಿರುವ ಕಾರಣ ಶಾಲೆಗಳಲ್ಲಿ ಹಿಂದೆ ಇದ್ದಂತೆ ಎಲ್ಲ ತರಗತಿಗಳಿಗೂ ಮೌಲ್ಯಾಂಕನ ಮುಂದುವರಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು 2024–25ನೇ ಶೈಕ್ಷಣಿಕ ಸಾಲಿನಿಂದ ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಭಾಗ–1 ಮತ್ತು ಭಾಗ–2ರ ಆಧಾರದಲ್ಲಿ ಮೌಲ್ಯಾಂಕನ ಪೂರ್ಣಗೊಳಿಸಬೇಕು. ಶಾಲಾ ಬ್ಯಾಗ್ ಹೊರೆ ತಗ್ಗಿಸಲು ಮೊದಲಾರ್ಧ ಶೇ 50ರಷ್ಟು ಪಠ್ಯ ಹಾಗೂ ನಂತರದ ಅರ್ಧ ಶೇ 50ರಷ್ಟು ಪಠ್ಯದ ನಿಯಮ ಅನುಸರಿಸಬೇಕು ಎಂದು ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT