ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 29ರಿಂದ ಶಾಲೆಗಳು ಆರಂಭ

2023–24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ; ಅ.8 ರಿಂದ 24 ರವರೆಗೆ ದಸರಾ ರಜೆ
Last Updated 6 ಏಪ್ರಿಲ್ 2023, 20:43 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮೇ 29ರಿಂದ ಆರಂಭವಾಗಲಿವೆ. ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2023–24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಮೇ 29ರಿಂದ ಅ.7ರವರೆಗೆ ಮೊದಲ ಅವಧಿಯ ತರಗತಿಗಳು ನಡೆಯಲಿವೆ. ಅ.8 ರಿಂದ 24ರವರೆಗೆ ದಸರಾ ರಜೆ ನೀಡಲಾಗುತ್ತದೆ. ಮತ್ತೆ ಅ.25ರಿಂದ ಏಪ್ರಿಲ್‌ 10, 2024ರವರೆಗೆ ಎರಡನೇ ಅವಧಿಯ ತರಗತಿಗಳು ನಡೆಯಲಿವೆ. ಮೇ 31, 2023 ರಂದು ರಾಜ್ಯದಾದ್ಯಂತ ಏಕಕಾಲಕ್ಕೆ ಶಾಲಾ ಪ್ರಾರಂಭೋತ್ಸವ ಹಮ್ಮಿಕೊಳ್ಳಬೇಕು. ಜೂನ್‌ 30ರ ಒಳಗೆ ಪ್ರವೇಶ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 244 ದಿನಗಳನ್ನು ಶಾಲಾ ಕರ್ತವ್ಯದ ದಿನಗಳೆಂದು ಪರಿಗಣಿಸಲಾಗಿದೆ. ಬೋಧನೆ ಮತ್ತು ಕಲಿಕಾ ಪ್ರಕ್ರಿಯೆಗೆ 180 ದಿನಗಳನ್ನು ಮೀಸಲಿಡಲಾಗಿದೆ. ಪರೀಕ್ಷಾ ಕಾರ್ಯಗಳಿಗೆ 26, ಪಠ್ಯೇತರ ಚಟುವಟಿಕೆ
ಗಳಿಗಾಗಿ 24, ಮೌಲ್ಯಮಾಪನ ಪ್ರಕ್ರಿಯೆಗಾಗಿ 10 ದಿನಗಳನ್ನು ನಿಗದಿಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT