ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಮೆರಿಕ ವೀಸಾ ನಿರಾಕರಣೆ: ಶಿಲ್ಪಿ ಅರುಣ್‌ ಯೋಗಿರಾಜ್ ಬೇಸರ

Published : 14 ಆಗಸ್ಟ್ 2024, 13:31 IST
Last Updated : 14 ಆಗಸ್ಟ್ 2024, 13:31 IST
ಫಾಲೋ ಮಾಡಿ
Comments

ಬೆಂಗಳೂರು: ‘ನಾನು ಇದೇ ಮೊದಲ ಬಾರಿಗೆ ಅಮೆರಿಕಕ್ಕೆ ಹೋಗುವವನಿದ್ದೆ. ಈ ವಿಚಾರದಲ್ಲಿ ನಮ್ಮ ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ನನಗೆ ಸಹಕಾರ ದೊರೆತಿತ್ತು. ಆದರೆ, ಅಮೆರಿಕದ ಎಂಬೆಸ್ಸಿಯಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಅರುಣ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಅರುಣ್‌ ಈ ತಿಂಗಳ ಅಂತ್ಯದಲ್ಲಿ 20 ದಿನಗಳ ಅಮೆರಿಕ ಪ್ರವಾಸ ಕೈಗೊಂಡಿದ್ದರು. ಅಮೆರಿಕದ ಕನ್ನಡ ಕೂಟ ಆಯೋಜಿಸಿದ್ದ 12ನೇ ಅಕ್ಕ ಸಮ್ಮೇಳನ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅರುಣ್‌ ಯೋಜಿಸಿದ್ದರು ಎಂದು ಕುಟುಂಬ ತಿಳಿಸಿದೆ.

‘ವೀಸಾ ಪಡೆಯಲು ಅರ್ಜಿಯಲ್ಲಿನ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯವಿರುವ ದಾಖಲೆಗಳನ್ನೂ ಒದಗಿಸಿದ್ದರು. ಆದರೂ ವೀಸಾ ದೊರಕಲಿಲ್ಲ. ವಿಸಾ ನಿರಾಕರಣೆಗೆ ಕಾರಣ ಏನು ಎಂಬುದು ಈವರೆಗೂ ತಿಳಿದುಬಂದಿಲ್ಲ’ ಎಂದು ಅರುಣ್‌ ಕುಟುಂಬ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT