ಧಾರವಾಡ: ಇಲ್ಲಿನ ಸತ್ತೂರಿನಲ್ಲಿರುವ ಎಸ್‌ಡಿಎಂ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಮತ್ತೆ 77 ಜನರಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 281ಕ್ಕೆ ಏರಿಕೆಯಾಗಿದೆ.

ಶುಕ್ರವಾರದವರೆಗೆ ಸೋಂಕಿತರ ಸಂಖ್ಯೆ 204 ಇತ್ತು. ಇವರಲ್ಲಿ ಇಬ್ಬರು ಸಿಬ್ಬಂದಿ ಹಾಗೂ ನಾಲ್ಕು ವಿದ್ಯಾರ್ಥಿಗಳಲ್ಲಿ ಮಾತ್ರ ಕೋವಿಡ್ ರೋಗ ಲಕ್ಷಣಗಳು ಕಂಡುಬಂದಿವೆ. ಉಳಿದವರಲ್ಲಿ ರೋಗದ ಲಕ್ಷಣಗಳು ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ತಿಳಿಸಿದ್ದಾರೆ.

‘ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ತಪಾಸಣೆಗೆ ಒಳಪಟ್ಟವರನ್ನು ಪ್ರತ್ಯೇಕವಾಗಿರಲು ಸೂಚಿಸಲಾಗಿದೆ. 1822 ಜನರ ತಪಾಸಣಾ ವರದಿಗಳು ಬರಬೇಕಿದೆ. ವಿದ್ಯಾರ್ಥಿ ನಿಲಯದಲ್ಲಿ ಕ್ವಾರಂಟೈನ್‌ನಲ್ಲಿರುವವರಿಗೆ ಚಿಕಿತ್ಸೆ ಹಾಗೂ ಔಷಧೋಪಚಾರ ನಡೆಯುತ್ತಿದೆ’ ಎಂದು ತಿಳಿಸಿದ್ದಾರೆ.

‘ಜಿಲ್ಲಾಡಳಿತದ ಆದೇಶದಂತೆ ಆಸ್ಪತ್ರೆಯ ಹೊರರೋಗಿಗಳ ವಿಭಾಗವನ್ನು ಮುಚ್ಚಲಾಗಿದೆ. ತುರ್ತು ವಿಭಾಗ ಕಾರ್ಯನಿರ್ವಹಿಸುತ್ತಿದೆ. ಸೋಂಕು ನಿಯಂತ್ರಿಸಲು ಕಾಲೇಜು ಮತ್ತು ಆಸ್ಪತ್ರೆಯು ಜಿಲ್ಲಾಡಳಿತದೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತಿದೆ‘ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.