ಬೆಂಗಳೂರು: ಕಾರವಾರದಲ್ಲಿ ಸೀಬರ್ಡ್ ನೌಕಾನೆಲೆಯು ನಿರ್ಮಿಸುತ್ತಿರುವ ವಾಯುನೆಲೆಯನ್ನು ವಿಸ್ತರಿಸಿ, ಸಿವಿಲ್ ಎನ್ಕ್ಲೇವ್ ನಿರ್ಮಿಸುವ ಯೋಜನೆಗೆ ವಶಪಡಿಸಿಕೊಂಡ ಭೂಮಿಗೆ 2013ರ ಭೂಸ್ವಾಧೀನ ಕಾಯ್ದೆ ಅನ್ವಯ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಭೂಸ್ವಾಧೀನ ಪ್ರಕ್ರಿಯೆಯಲ್ಲಿ ನಡೆದಿರುವ ತಾರತಮ್ಯ ಕುರಿತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮತ್ತು ಕಾರವಾರ ಶಾಸಕ ಸತೀಶ್ ಸೈಲ್ ನೇತೃತ್ವದ ನಿಯೋಗವು ಮುಖ್ಯಮಂತ್ರಿಯನ್ನು ಶನಿವಾರ ಭೇಟಿ ಮಾಡಿ ಚರ್ಚೆ ನಡೆಸಿತು.

‘ಪರಿಹಾರ ನೀಡುವ ವಿಚಾರದಲ್ಲಿ ಬಿಜೆಪಿ ಸರ್ಕಾರ ಮಾಡಿದ ಅನ್ಯಾಯ ಮತ್ತು ಮೋಸ ಸರಿಪಡಿಸಿ’ ಎಂದು ಮೂರು ಗ್ರಾಮಗಳ ನಿರಾಶ್ರಿತ ಕುಟುಂಬಗಳು ಸಭೆಯಲ್ಲಿ ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ, ವೈಜ್ಞಾನಿಕವಾಗಿ, ನಿಯಮಬದ್ದವಾಗಿ ಪರಿಹಾರ ಕೊಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಭೂಸ್ವಾಧೀನ ಪರಿಹಾರ ನಿಗದಿ, ಭೂಮಿ ಕಳೆದುಕೊಂಡವರಿಗೆ ಉದ್ಯೋಗ ಮತ್ತು ಸೂಕ್ತ ನಿವೇಶನ ನೀಡುವ ಕುರಿತಂತೆ ಮುಖ್ಯ ಕಾರ್ಯದರ್ಶಿ ಮತ್ತು ಸಂಬಂಧಿಸಿದ ಇತರ ಅಧಿಕಾರಿಗಳ ಜೊತೆ ಚರ್ಚಿಸುವಂತೆ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲರಿಗೆ ಮುಖ್ಯಮಂತ್ರಿ ಸೂಚಿಸಿದರು.

ಸೀಬರ್ಡ್ ಮೊದಲ ಹಂತದ ಯೋಜನೆಯಡಿ ಭೂಮಿ ಕಳೆದುಕೊಂಡ ಕುಟುಂಬದವರಿಗೂ ಉದ್ಯೋಗ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದೂ ಮುಖ್ಯಮಂತ್ರಿ ತಿಳಿಸಿದರು.

ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಮುಖ್ಯಮಂತ್ರಿಯ ಕಾರ್ಯದರ್ಶಿ ಜಿಯಾವುಲ್ಲಾ, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಮೂಲಸೌಕರ್ಯ ಇಲಾಖೆ ಜಂಟಿ ಕಾರ್ಯದರ್ಶಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.