ಬೆಂಗಳೂರು: ‘ಬೆಂಗಳೂರಿನ ಸಮೀಪ ಎರಡನೇ ಅಂತರರಾಷ್ಟ್ರಿಯ ವಿಮಾನ ನಿಲ್ದಾಣವನ್ನು ನಿರ್ಮಿಸಲು ಇನ್ನೂ ಸ್ಥಳ ನಿಗದಿಯಾಗಿಲ್ಲ. ಈ ಸಂಬಂಧ ಇನ್ನಷ್ಟು ಸಮಾಲೋಚನೆ ನಡೆಸುವ ಅವಶ್ಯ ಇದೆ’ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ವಿಮಾನಯಾನ ವಲಯದ ಪ್ರಮುಖರ ಜತೆಗೆ ಬುಧವಾರ ಅವರು ಸಭೆ ನಡೆಸಿದರು. ‘ಬೆಂಗಳೂರು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ದಟ್ಟಣೆ ಎದುರಿಸುತ್ತಿದೆ. ಹೀಗಾಗಿ ಎರಡನೇ ವಿಮಾನ ನಿಲ್ದಾಣ ಬೇಕು ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ’ ಎಂದರು.

‘ಇದನ್ನು ಹೇಗೆ ಕಾರ್ಯಗತಗೊಳಿಸಬೇಕು ಎಂಬುದರ ಬಗ್ಗೆ ಉದ್ಯಮಿಗಳು ಮತ್ತು ಅಧಿಕಾರಿಗಳು ಸಭೆಯಲ್ಲಿ ಸಲಹೆಗಳನ್ನು ನೀಡಿದ್ದಾರೆ. ಈ ಸಂಬಂಧ ಇನ್ನಷ್ಟು ಚರ್ಚೆಗಳನ್ನು ನಡೆಸಲಾಗುವುದು’ ಎಂದರು.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿ ಮರಾರ್, ಉದ್ಯಮಿ ಕ್ಯಾಪ್ಟನ್ ಗೋಪಿನಾಥ್, ಮುಖ್ಯಮಂತ್ರಿಯವರ ಹಾಗೂ ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಎನ್ ಮಂಜುಳಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.