ಬೆಂಗಳೂರು: ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಎರಡನೇ ಪಟ್ಟಿ ಪ್ರಕಟಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕಮಾರ್ ತಿಳಿಸಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಶನಿವಾರ ಮಾತನಾಡಿದ ಅವರು, ‘ಶೇ 95ರಷ್ಟು ಹಾಲಿ ಶಾಸಕರಿಗೇ ಟಿಕೆಟ್ ಸಿಗಲಿದೆ. ಕೆಲವು ಕ್ಷೇತ್ರಗಳಲ್ಲಿ ಸಂಧಾನ ಮಾತುಕತೆ ನಡೆಯುತ್ತಿದ್ದು, ಎರಡನೇ ಪಟ್ಟಿಯಲ್ಲಿ ಉಳಿದ ಹೆಸರುಗಳು ಪ್ರಕಟವಾಗಲಿದೆ' ಎಂದು ತಿಳಿಸಿದರು.

ನಂಜನಗೂಡು ಕ್ಷೇತ್ರದಲ್ಲಿ ಆರ್. ಧ್ರುವನಾರಾಯಣ ಅವರ ಪುತ್ರನಿಗೆ ಟಿಕೆಟ್ ನೀಡಿರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ಈ ಕ್ಷೇತ್ರದಲ್ಲಿ ಧ್ರುವನಾರಾಯಣ ಅವರು ಸ್ಪರ್ಧಿಸಬೇಕಿತ್ತು. ಆದರೆ, ಅವರು ನಮ್ಮನ್ನು ಅಗಲಿದ್ದಾರೆ. ಹೀಗಾಗಿ ಯುವಕರಾದ ಅವರ ಪುತ್ರನಿಗೆ ಟಿಕೆಟ್ ನೀಡಿದ್ದೇವೆ’ ಎಂದರು.

ವಿರೋಧದ ನಡುವೆಯೂ ಪುಟ್ಟಣ್ಣ ಅವರಿಗೆ ರಾಜಾಜಿನಗರ ಕ್ಷೇತ್ರದ ಟಿಕೆಟ್ ನೀಡಿರುವ ಬಗ್ಗೆ ಕೇಳಿದಾಗ, ’ಪುಟ್ಟಣ್ಣ ಅವರು ನಾಲ್ಕೂವರೆ ವರ್ಷಗಳ ವಿಧಾನ ಪರಿಷತ್ ಸದಸ್ಯತ್ವ ತ್ಯಜಿಸಿ ಪಕ್ಷ ಸೇರಿದ್ದಾರೆ. ಹೀಗಾಗಿ ಅವರಿಗೆ ಒಂದು ಅವಕಾಶ ಕಲ್ಪಿಸಲು ಪಕ್ಷ ತೀರ್ಮಾನಿಸಿದೆ ' ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರವಾಗಿ ಕೇಳಿದಾಗ, 'ಕ್ಷೇತ್ರ ಆಯ್ಕೆಯನ್ನು ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಅವರು ವರುಣಾದಿಂದ ಸ್ಪರ್ಧಿಸಲು ಇಚ್ಚಿಸಿದ್ದು, ಪಕ್ಷ ಟಿಕೆಟ್ ನೀಡಿದೆ' ಎಂದರು.

ಕೋಲಾರ, ಬಾದಾಮಿ ಕ್ಷೇತ್ರಕ್ಕೆ ಟಿಕೆಟ್ ಘೋಷಣೆಯಾಗದ ಕಾರಣ ಸಿದ್ದರಾಮಯ್ಯ ಅವರು ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸಬಹುದೇ ಎಂದು ಕೇಳಿದಾಗ, ’ಈ ಪ್ರಶ್ನೆಯನ್ನು ಪಕ್ಷದ ಹೈಕಮಾಂಡ್ ಗೆ ಕೇಳಬೇಕು' ಎಂದು ತಿಳಿಸಿದರು.

ಮೀಸಲಾತಿ ಬೋಗಸ್: ಮೀಸಲಾತಿ ಹೆಚ್ಚಳ ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ಇದೆಲ್ಲವೂ ಬೋಗಸ್ ಘೋಷಣೆ. ರಾಜ್ಯದ ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನ’ ಎಂದರು.

ರಾಜಕೀಯ ದ್ವೇಷದಿಂದ ರಾಹುಲ್ ಅನರ್ಹ: 'ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ' ಎಂದು ಡಿ.ಕೆ. ಶಿವಕುಮಾರ್ ಕಿಡಿಕಾರಿದರು.

‘ಕರ್ನಾಟಕದಲ್ಲಿ ಇಬ್ಬರು ಬಿಜೆಪಿ ಶಾಸಕರು ಚೆಕ್ ಬೌನ್ಸ್ ಹಾಗೂ ಇತರೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅವರನ್ನು ಅನರ್ಹಗೊಳಿಸಿಲ್ಲ ಯಾಕೆ? ಅವರಿಗೆ ಬೇರೆ, ನಮಗೆ ಬೇರೆ ಕಾನೂನು ಇದೆಯೇ‘ ಎಂದೂ ಪ್ರಶ್ನಿಸಿದರು.

‘ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ್ದು, ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ಮಾಡಲಾಗಿದೆ. ನಾವು ಇದನ್ನು ಖಂಡಿಸುತ್ತೇವೆ. ನ್ಯಾಯಾಲಯದಲ್ಲಿ ಈ ವಿಚಾರವಾಗಿ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯ ಸಿಗುವ ಭರವಸೆ ಇದೆ' ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.