ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್‌ 10ರಿಂದ ದ್ವಿತೀಯ ಪಿಯು ಪರೀಕ್ಷೆ

Last Updated 21 ಅಕ್ಟೋಬರ್ 2022, 14:29 IST
ಅಕ್ಷರ ಗಾತ್ರ

ಬೆಂಗಳೂರು: 2022–23ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಗಳನ್ನು ಮಾರ್ಚ್ 10ರಿಂದ 29ರವರೆಗೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟಿಸಿದೆ.

ಮಾರ್ಚ್‌ 10ರಂದು ಕನ್ನಡ, ಅರೆಬಿಕ್‌, 11ರಂದು ಗಣಿತ, ಶಿಕ್ಷಣಶಾಸ್ತ್ರ, 13ರಂದು ಅರ್ಥಶಾಸ್ತ್ರ, 14ರಂದು ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ವಿಜ್ಞಾನ, ಮೂಲಗಣಿತ, 15ರಂದು ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌, 16ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, 17ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೊಮೊಬೈಲ್‌, ಆರೋಗ್ಯ, ಸೌಂದರ್ಯ ಮತ್ತು ಕ್ಷೇಮಶಾಸ್ತ್ರ, 18ರಂದು ಭೂಗೋಳಶಾಸ್ತ್ರ, ಜೀವಶಾಸ್ತ್ರ, 20ರಂದು ಇತಿಹಾಸ, ಭೌತಶಾಸ್ತ್ರ, 21ರಂದು ಹಿಂದಿ, 23ರಂದು ಇಂಗ್ಲಿಷ್‌, 25ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, 27ರಂದು ಐಚ್ಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ, 29ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.

ವೇಳಾಪಟ್ಟಿಯಲ್ಲಿ ಆಕ್ಷೇಪಣೆಗಳು ಇದ್ದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ನ.11ರ ಸಂಜೆ 5.30ರ ಒಳಗೆ jdexm.dpue@gmail.comಗೆ ಸಲ್ಲಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT