ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಟುಂಬಿಕ ಪಿಂಚಣಿಗೆ ಎರಡನೇ ಪತ್ನಿ ಅರ್ಹಳಲ್ಲ: ಹೈಕೋರ್ಟ್‌

Published 27 ನವೆಂಬರ್ 2023, 16:33 IST
Last Updated 27 ನವೆಂಬರ್ 2023, 16:33 IST
ಅಕ್ಷರ ಗಾತ್ರ

ಬೆಂಗಳೂರು: ‘ಮೊದಲ ಪತ್ನಿಗೆ ಮಾತ್ರವೇ ತನ್ನ ಮೃತ ಪತಿಯ ಕೌಟುಂಬಿಕ ಪಿಂಚಣಿ ಪಡೆಯುವ ಅಧಿಕಾರವಿದೆ. ಮೊದಲನೇ ಪತ್ನಿ ಬದುಕಿದ್ದಾಗ 2ನೇ ವಿವಾಹಕ್ಕೆ ಮಾನ್ಯತೆಯಿಲ್ಲ. ಹೀಗಾಗಿ, ಎರಡನೇ ಪತ್ನಿ ಪಿಂಚಣಿ ಪಡೆಯುವ ಹಕ್ಕನ್ನು ಹೊಂದಿಲ್ಲ‘ ಎಂದು ಹೈಕೋರ್ಟ್‌ ಆದೇಶಿಸಿದೆ.

ಎರಡನೇ ಪತ್ನಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ಏಕಸದಸ್ಯ ನ್ಯಾಯಪೀಠದ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ನಿರಾಕರಿಸಿರುವ ವಿಭಾಗೀಯ ನ್ಯಾಯಪೀಠ, ‘ಹಿಂದೂ ವಿವಾಹ ಕಾಯ್ದೆ–1955ರ ಕಲಂ 17ರ ಪ್ರಕಾರ ದ್ವಿಪತ್ನಿತ್ವ ಅಪರಾಧ. ಕರ್ನಾಟಕ ನಾಗರಿಕ ಸೇವಾ ನಿಯಮಗಳ ಪ್ರಕಾರ ಸರ್ಕಾರಿ ನೌಕರನಿಗೆ ಕಾನೂನು ಬದ್ಧವಾಗಿ ವಿವಾಹವಾದ ಪತ್ನಿಗೆ ಮಾತ್ರವೇ ಕುಟುಂಬದ ಪಿಂಚಣಿ ಸಂದಾಯವಾಗುತ್ತದೆ. ಆದ್ದರಿಂದ, ನಿಯಮಾನುಸಾರ ಕೌಟುಂಬಿಕ ಪಿಂಚಣಿಯನ್ನು ಕಾನೂನುಬದ್ಧ ಪತ್ನಿಗೆ ನೀಡಲಾಗುತ್ತದೆ’ ಎಂದು ವಿವರಿಸಿದೆ.

ಪ್ರಕರಣವೇನು?:

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ನಂಜುಂಡಪ್ಪ ಕಾರ್ಯ ನಿರ್ವಹಿಸುತ್ತಿದ್ದರು. ನಿಯಮಾನುಸಾರ ಇವರ ಮೊದಲನೇ ಪತ್ನಿಗೆ ಕೌಟುಂಬಿಕ ಪಿಂಚಣಿ ನೀಡಲಾಗುತ್ತಿತ್ತು. ಆದರೆ, ಎರಡನೇ ಪತ್ನಿ, ‘ನಾನು ಎರಡನೇ ಪತ್ನಿ. ಕೌಟುಂಬಿಕ ಪಿಂಚಣಿಗೆ ಅರ್ಹಳಿದ್ದೇನೆ. ನನಗೆ ಪಿಂಚಣಿ ನೀಡಬೇಕು‘ ಎಂದು ಇಲಾಖೆಗೆ ಮನವಿ ಸಲ್ಲಿಸಿದ್ದರು. ಇಲಾಖೆ ಇದನ್ನು ಸಾರಾಸಗಟಾಗಿ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT