ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮದಲ್ಲಿ ಭದ್ರತಾ ನಿಯಮ ಉಲ್ಲಂಘನೆಯಾಗಿರುವ ಘಟನೆ ನಡೆದಿದೆ.
ವಿಧಾನಸೌಧದ ಮುಂಭಾಗ ನಡೆಯುತ್ತಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಸಿ.ಎಂ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಗಣ್ಯರು ಆಸೀನರಾಗಿದ್ದರು.