ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಹತ್ಯೆ ಖಂಡಿಸಿ ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತ ಬಂದ್

Published 10 ಜುಲೈ 2023, 8:48 IST
Last Updated 10 ಜುಲೈ 2023, 8:48 IST
ಅಕ್ಷರ ಗಾತ್ರ

ಶಿಕಾರಿಪುರ: ಗೋ ಹತ್ಯೆ ಖಂಡಿಸಿ ಪಟ್ಟಣದಲ್ಲಿ ಸೋಮವಾರ ನಡೆದ ಸ್ವಯಂ ಪ್ರೇರಿತ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಶಿಕಾರಿಪುರ ಬಂದ್ ಸಂಪೂರ್ಣ ಯಶಸ್ವಿಯಾಗಿದೆ.

ಬೆಳಿಗ್ಗೆಯಿಂದಲೇ ಪಟ್ಟಣದಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ವ್ಯಾಪಾರಸ್ಥರು ಬಂದ್ ಗೆ ಬೆಂಬಲ ಸೂಚಿಸಿದರು. ಇದೇ ಸಂದರ್ಭದಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಗೋಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಜಾಥಾ ನಡೆಯಿತು. ಸಾವಿರಾರು ಯುವಕರು ಗೋಹತ್ಯೆ ರಕ್ಷಣೆ ಬಗ್ಗೆ ಘೋಷಣೆ ಕೂಗುತ್ತಾ ಹೆಜ್ಜೆ ಹಾಕಿದರು. ಮೆರವಣಿಗೆ ಸಂದರ್ಭದಲ್ಲಿ ಪೊಲೀಸ್ ಬಿಗಿಬಂದೋಬಸ್ತ್ ಆಯೋಜಿಸಲಾಗಿತ್ತು.

ಜಾಗೃತಿ ಜಾಥಾ ನಂತರ ಸಾಂಸ್ಕೃತಿಕ ಭವನದಲ್ಲಿ ಜನ ಜಾಗೃತಿ ಸಭೆ ನಡೆಯಿತು. ಹಿಂದೂ ಜಾಗರಣಾ ವೇದಿಕೆ ಪ್ರಾಂತ್ಯ ಕಾರ್ಯಕಾರಿ ಸಮಿತಿ ಸದಸ್ಯ ಕಾರ್ಕಳ ಶ್ರೀಕಾಂತ್ ದಿಕ್ಸೂಜಿ ಭಾಷಣ ಮಾಡಿದರು.

ಹಿಂದೂ ಜಾಗರಣ ವೇದಿಕೆ ದಕ್ಷಿಣ ಪ್ರಾಂತ್ಯ ಸಹ ಸಂಚಾಲಕ ಸತೀಶ್ ದಾವಣಗೆರೆ, ಜಿಲ್ಲಾ ಸಂಚಾಲಕ ದೇವರಾಜ್ ಅರಳಿಹಳ್ಳಿ, ಆರ್ ಎಸ್ ಎಸ್ ಸಾಗರ ಜಿಲ್ಲಾ ಕಾರ್ಯವಾಹ ಶ್ರೀಧರ್ ನಿಸಾರಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT