ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಮೊದಲ ಮಹಿಳಾ ಕುಲಪತಿಯಾಗಿದ್ದ ಡಾ. ಪಿ. ಸೆಲ್ವಿದಾಸ್ (88) ಅವರು ನಗರದ ಆಸ್ಪತ್ರೆಯಲ್ಲಿ ಸೋಮವಾರ ಬೆಳಿಗ್ಗೆ ನಿಧನರಾದರು. ವಯೋಸಹಜ ಸಮಸ್ಯೆಗಳಿಂದ ಅವರು ಬಳಲುತ್ತಿದ್ದರು.

ಕೋಲಾರದ ಕೆಜಿಎಫ್ನಲ್ಲಿ 1932 ಸೆ.29ರಂದು ಅವರು ಜನಿಸಿದರು. ಅವರ ತಂದೆ ಕೆಜಿಎಫ್ನಲ್ಲಿ ಗುತ್ತಿಗೆದಾರರಾಗಿದ್ದರು. 1956ರಲ್ಲಿ ಮೈಸೂರಿನ ಸಿಎಫ್ಟಿಆರ್ಐನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿದ್ದ ಅವರು, ಅಮೆರಿಕದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಅಲ್ಲಿಂದ ಸ್ವದೇಶಕ್ಕೆ ಬಂದು ಬೆಂಗಳೂರು ಗೃಹವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾಗಿ ಅನೇಕ ಸುಧಾರಣಾ ಕ್ರಮಗಳನ್ನು ತೆಗೆದುಕೊಂಡರು.

ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಸೆಲ್ವಿದಾಸ್ ಅವರು ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕಗೊಂಡಿದ್ದು 1988ರಲ್ಲಿ. ಕುಲಪತಿಯಾಗಿದ್ದ ವೇಳೆಯೇ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಸದಸ್ಯರೂ ಆಗಿದ್ದರು. 1989ರಲ್ಲಿ ವಿಶ್ವವಿದ್ಯಾಲಯದಲ್ಲಿ ಮಹಿಳಾ ಅಧ್ಯಯನ ಕೇಂದ್ರವನ್ನು ಅವರು ಪ್ರಾರಂಭಿಸಿದ್ದರು.

1991ರಿಂದ 1997ರವರೆಗೆ ಕೇಂದ್ರ ಲೋಕಸೇವಾ ಆಯೋಗದ ಸದಸ್ಯರಾಗಿ, ನಂತರ 1997ರಿಂದ 6 ವರ್ಷಗಳವರೆಗೆ ರಾಜ್ಯಸಭಾ ಸದಸ್ಯರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು.

ಅವಿವಾಹಿತರಾಗಿದ್ದ ಅವರಿಗೆ ಒಬ್ಬ ತಮ್ಮ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.