ಬೆಂಗಳೂರು: ರಾಜ್ಯದ ಪ್ರತಿ ಶಾಲೆಯಲ್ಲೂ ವಿದ್ಯಾರ್ಥಿಗಳು ಅರ್ಧ ವೃತ್ತಾಕಾರದಲ್ಲಿ ಕುಳಿತು ಶಿಕ್ಷಣ ಪಡೆಯುವ ವ್ಯವಸ್ಥೆ ಜಾರಿ ಮಾಡಬೇಕು ಎಂದು ಮಕ್ಕಳ ಹಕ್ಕುಗಳ ಕಾರ್ಯಕರ್ತ ನಾಗಸಿಂಹ ಜಿ. ರಾವ್ ಮನವಿ ಮಾಡಿದ್ದಾರೆ.

ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಈ ಬಗ್ಗೆ ಪತ್ರ ಬರೆದಿರುವ ಅವರು, ‘ಕೇರಳದಲ್ಲಿ ಈ ಪದ್ಧತಿ ಅಳವಡಿಸಿಕೊಳ್ಳಲಾಗಿದೆ. ಈ ಪದ್ಧತಿಯಿಂದ ಶಿಕ್ಷಕರು ಪ್ರತಿಯೊಬ್ಬ ವಿದ್ಯಾರ್ಥಿಯ ಮುಖವನ್ನು ಸುಲಭವಾಗಿ ನೋಡಬಹುದು. ಇದರಿಂದ ವಿದ್ಯಾರ್ಥಿಗಳ ಮುಖಭಾವ, ಆಸಕ್ತಿ ಮತ್ತು ತೊಡಗಿಸಿಕೊಳ್ಳುವಿಕೆಯನ್ನು ಗಮನಿಸಲು ಸಾಧ್ಯವಾಗುತ್ತದೆ. ಶಿಕ್ಷಕರಿಗೆ ಪ್ರತಿಯೊಬ್ಬರೊಂದಿಗೆ ವೈಯಕ್ತಿಕವಾಗಿ ಸಂವಾದ ನಡೆಸಲು ಅನುಕೂಲವಾಗುತ್ತದೆ’ ಎಂದಿದ್ದಾರೆ.

‘ಚರ್ಚೆ, ಗುಂಪು ಕೆಲಸ, ಪ್ರಾತ್ಯಕ್ಷಿಕೆ, ದೃಶ್ಯ-ಶ್ರವಣ ಸಾಧನಗಳ ಬಳಕೆ ಮುಂತಾದ ವಿವಿಧ ಕಲಿಕಾ ಶೈಲಿಗಳಿಗೆ ಪದ್ಧತಿ ಸೂಕ್ತವಾಗಿದೆ. ಶಿಕ್ಷಕರಿಗೆ ತಮ್ಮ ಬೋಧನಾ ವಿಧಾನವನ್ನು ವೈವಿಧ್ಯಗೊಳಿಸಲು ಅವಕಾಶ ನೀಡುತ್ತದೆ. ಕೇರಳದ ಶಾಲೆಗಳಲ್ಲಿ ಈ ವಿಧಾನವನ್ನು ಅಳವಡಿಸಿಕೊಂಡ ನಂತರ, ವಿದ್ಯಾರ್ಥಿಗಳ ಕಲಿಕೆಯ ಫಲಿತಾಂಶಗಳು, ಸಾಮಾಜಿಕ ಕೌಶಲ ಮತ್ತು ತರಗತಿಯ ವಾತಾವರಣದಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.