ಬೆಂಗಳೂರು: ಬ್ರಿಟನ್ನ ಎಸ್.ಸಿ.ಐ ಸೆಮಿಕಂಡಕ್ಟರ್ಸ್ ಕಂಪನಿ ಕರ್ನಾಟಕದಲ್ಲಿ ‘ಜಾಗತಿಕ ಸಾಮರ್ಥ್ಯ ಕೇಂದ್ರ (ಜಿಸಿಸಿ)’ ಸ್ಥಾಪಿಸುವ ಆಸಕ್ತಿ ತೋರಿದೆ.

ಈ ಕುರಿತು ಮಾಹಿತಿ ನೀಡಿರುವ ಬ್ರಿಟನ್ ಪ್ರವಾಸದಲ್ಲಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ‘ರಾಜ್ಯದಲ್ಲಿ ಕಂಪನಿಯ ಬಂಡವಾಳ ಹೂಡಿಕೆ, ಭವಿಷ್ಯದ ಸಹಭಾಗಿತ್ವಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ. ಇದರಿಂದ ಕಂಪ್ಯೂಟರ್ ಸುರಕ್ಷತೆಗೆ ಅಗತ್ಯವಿರುವ ಅಂತರ್ಗತ ಸುರಕ್ಷೆಯ ಮೈಕ್ರೊ–ಪ್ರೊಸೆಸರ್ಗಳ ತಯಾರಿಕೆ ಸ್ಥಳೀಯವಾಗಿ ಸಾಧ್ಯವಾಗಲಿದೆ’ ಎಂದಿದ್ದಾರೆ.

‘ವಿಯರ್ ಗ್ರೂಪ್, ಲೇಟೋಸ್ ಡೇಟಾ ಸೆಂಟರ್, ಸ್ಯಾಮ್ಕೋ ಹೋಲ್ಡಿಂಗ್ಸ್, ಎ.ಆರ್.ಎಂ. ಸೆಮಿಕಂಡಕ್ಟರ್ಸ್ ಕಂಪನಿಗಳ ಮುಖ್ಯಸ್ಥರೊಂದಿಗೆ ಬಂಡವಾಳ ಹೂಡಿಕೆ, ವಿಸ್ತರಣೆ ಕುರಿತು ಪ್ರತ್ಯೇಕ ಸಭೆಗಳನ್ನು ನಡೆಸಿದ್ದು, ‘ಎ.ಆರ್.ಎಂ. ಸೆಮಿಕಂಡಕ್ಟರ್ಸ್ ಕಂಪನಿಯ ಎರಡನೇ ಅತ್ಯಂತ ದೊಡ್ಡ ಕಚೇರಿ ಬೆಂಗಳೂರಿನಲ್ಲಿದೆ. ಅದು ಆಸ್ಟಿನ್-ಬೆಂಗಳೂರು-ಕ್ಯಾಲಿಫೋರ್ನಿಯಾ (ಎಬಿಸಿ) ವ್ಯಾಪ್ತಿಯನ್ನು ಹೊಂದಿದೆ. ಈಗ ಕಂಪನಿಯು ತನ್ನ ಜಾಗತಿಕ ಕೇಂದ್ರಗಳಲ್ಲಿ ಸಹಭಾಗಿತ್ವವನ್ನು ವಿಸ್ತರಿಸಿಕೊಳ್ಳಲು ಬಯಸಿದೆ. ಬೆಂಗಳೂರಿನಲ್ಲಿ ತನ್ನ ಮತ್ತೊಂದು ಕಚೇರಿ ಸ್ಥಾಪಿಸಲು ಒಲವು ತೋರಿದೆ. ಕೇಂಬ್ರಿಡ್ಜ್ ಮತ್ತು ಬೆಂಗಳೂರು ನಗರಗಳೆರಡೂ ಸೆಮಿಕಂಡಕ್ಟರ್ ವಿನ್ಯಾಸ, ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಪ್ರತಿಭಾವಂತ ಯುವಜನರನ್ನು ಹೊಂದಿವೆ’ ಎಂದು ವಿವರಿಸಿದ್ದಾರೆ.

‘ಸ್ಯಾಮ್ಕೊ ಹೋಲ್ಡಿಂಗ್ಸ್ ಕಂಪನಿ ರಾಜ್ಯದಲ್ಲಿ ಮರುಬಳಕೆ ಇಂಧನ, ಎಥೆನಾಲ್ ಉತ್ಪಾದನೆ ಮತ್ತು ಬ್ಯಾಟರಿ ತಯಾರಿಕೆ ವಲಯಗಳಲ್ಲಿ ಬಂಡವಾಳ ಹೂಡಲಿದೆ. ಲೇಟೋಸ್ ಡೇಟಾ ಸೆಂಟರ್ ಬೆಂಗಳೂರಿನಲ್ಲಿ ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರಕ್ಕೆ ಇನ್ಕ್ಯುಬೇಷನ್ ಕೇಂದ್ರವನ್ನು ತೆರೆಯಲು ಆಸಕ್ತಿ ತೋರಿಸಿದೆ. ಗಣಿಗಾರಿಕೆ, ಖನಿಜ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ತನ್ನದೇ ಛಾಪು ಮೂಡಿಸಿರುವ ವಿಯರ್ ಗ್ರೂಪ್ ಬೆಂಗಳೂರಿನ ಸಮೀಪ ಇರುವ ತಯಾರಿಕಾ ಘಟಕ ವಿಸ್ತರಿಸಲು ಚಿಂತನೆ ನಡೆಸಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.