ಬೆಂಗಳೂರು: ಸಚಿವ ಸ್ಥಾನ ಆಕಾಂಕ್ಷಿಯಾಗಿರುವ ಕಾಂಗ್ರೆಸ್ನ ಹಿರಿಯ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿ ಮಾಡಿ ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ.

3– 4 ಬಾರಿ ಗೆದ್ದಿರುವ ಶಾಸಕರು ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಎಂ. ಪಟ್ಟಣ ಅವರ ನೇತೃತ್ವದಲ್ಲಿ ವಿಧಾನಸಭೆಯ ಮೊಗಸಾಲೆಯಲ್ಲಿರುವ ಮುಖ್ಯಮಂತ್ರಿಯ ಕಚೇರಿಯಲ್ಲಿ ಭೇಟಿ ಮಾಡಿ, ಸಂಪುಟ ಪುನರ್ರಚನೆಯ ವೇಳೆ ಅವಕಾಶ ನೀಡಲೇ ಬೇಕೆಂದು ಪಟ್ಟು ಹಿಡಿದಿದ್ದಾರೆ.

ನಿಯೋಗದಲ್ಲಿ ಎಚ್.ಸಿ. ಬಾಲಕೃಷ್ಣ, ಎನ್.ಎ. ಹ್ಯಾರಿಸ್, ಎಸ್. ಷಡಕ್ಷರಿ, ಮಹಾಂತೇಶ್ ಕೌಜಲಗಿ, ಹಂಪನಗೌಡ ಬಾದರ್ಲಿ, ಎಸ್.ಎನ್. ನಾರಾಯಣಸ್ವಾಮಿ, ರಾಘವೇಂದ್ರ ಹಿಟ್ನಾಳ್ ಮತ್ತಿತರರು ಇದ್ದರು.

ಸರ್ಕಾರ ರಚನೆಯಾಗಿ ಎರಡೂವರೆ ವರ್ಷ ಕಳೆದರೂ ಸಚಿವ ಸಂಪುಟ ಪುನರ್ರಚನೆ ಆಗಿಲ್ಲ ಎಂಬುದನ್ನು ಶಾಸಕರು ಪ್ರಸ್ತಾಪಿಸಿದ್ದಾರೆ. ಅಲ್ಲದೆ, ನಿರಂತರವಾಗಿ ಗೆದ್ದುಕೊಂಡು ಬಂದಿರುವ ತಮ್ಮನ್ನು ಮುಂದಿನ ಸಂಪುಟ ಪುನರ್ರಚನೆಯ ವೇಳೆ ಸಚಿವ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಮುಖ್ಯಮಂತ್ರಿ ಬಳಿ ಒಕ್ಕೊರಲಿನ ಮನವಿ ಮಾಡಿದ್ದಾರೆ ಎಂದು ಗೊತ್ತಾಗಿದೆ.

ಹೈಕಮಾಂಡ್ ಭೇಟಿಗೆ ನಿರ್ಧಾರ: ತಮ್ಮ ಬೇಡಿಕೆ ಈಡೇರಿಕೆಗಾಗಿ ಏಪ್ರಿಲ್ 11ರಂದು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಕೂಡಾ ಹಿರಿಯ ಶಾಸಕರು ನಿರ್ಧರಿಸಿದ್ದಾರೆ.

ದೆಹಲಿ ಯಾತ್ರೆಯ ವಿಚಾರವನ್ನು ಶಾಸಕರು ಮುಖ್ಯಮಂತ್ರಿಯ ಗಮನಕ್ಕೂ ತಂದಿದ್ದು, ಅದಕ್ಕೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ‘ಹೈಕಮಾಂಡ್ ಭೇಟಿ ಮಾಡುವುದು ನಿಮ್ಮ ಹಕ್ಕು. ಅದಕ್ಕೆ ನೀವು ಸ್ವತಂತ್ರರು. ನಾನು ಅಡ್ಡಿಪಡಿಸುವುದಿಲ್ಲ’ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಬಜೆಟ್ ಅಧಿವೇಶನ ಮುಗಿದ ಬಳಿಕ ದೆಹಲಿಗೆ ತೆರಳುತ್ತಿದ್ದು, ಆ ಸಂದರ್ಭದಲ್ಲಿ ಹೈಕಮಾಂಡ್ ಜೊತೆ ಸಂಪುಟ ಪುನರ್ರಚನೆಯ ಕುರಿತ ಬಗ್ಗೆ ಚರ್ಚಿಸುವುದಾಗಿ ಮತ್ತು ಹಿರಿಯ ಶಾಸಕರ ಬೇಡಿಕೆಯ ವಿಷಯವನ್ನು ವರಿಷ್ಠರ ಗಮನಕ್ಕೆ ತರುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದೂ ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.