ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿಗಳಾದ ಕೆ.ವಿ.ಶರತ್‌ಚಂದ್ರ ಹಾಗೂ ಹೇಮಂತ್ ಎಂ.ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಗುಪ್ತಚರ ವಿಭಾಗದ ಎಡಿಜಿಪಿಯಾಗಿದ್ದ ಕೆ.ವಿ.ಶರತ್‌ಚಂದ್ರ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ ಮತ್ತು ಹೆಚ್ಚುವರಿಯಾಗಿ ಸಂಚಾರ ಹಾಗೂ ರಸ್ತೆ ಸುರಕ್ಷತಾ ಮುಖ್ಯಸ್ಥರಾಗಿಯೂ ಜವಾಬ್ದಾರಿ ನೀಡಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಹೇಮಂತ್ ಎಂ.ನಿಂಬಾಳ್ಕರ್ ಅವರನ್ನು ರಾಜ್ಯ ಪೊಲೀಸ್ ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇದರ ಜತೆಗೆ ವಾರ್ತಾ ಇಲಾಖೆಯ ಆಯುಕ್ತರ ಜವಾಬ್ದಾರಿಯನ್ನೂ ಕೂಡ ಹೆಚ್ಚುವರಿಯಾಗಿ ನೀಡಲಾಗಿದೆ.
ಎಡಿಜಿಪಿ ಅಲೋಕ್‌ಕುಮಾರ್ ಅವರನ್ನು ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದಿಂದ ಬಿಡುಗಡೆ ಮಾಡಲಾಗಿದೆ.