ಬೆಂಗಳೂರು: ‘ಪುರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಕೃಷಿ ಭೂಮಿಯನ್ನು ವಾಣಿಜ್ಯ ಉದ್ದೇಶಗಳಿಗಾಗಿ ಪ್ರತ್ಯೇಕವಾಗಿ ಪರಿವರ್ತನೆ ಮಾಡಿಕೊಳ್ಳಬೇಕಾದ ಅಗತ್ಯವಿಲ್ಲ’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಈ ಸಂಬಂಧ ಬೆಳಗಾವಿ ಜಿಲ್ಲೆ ಬೈಲಹೊಂಗಲದ ಉದ್ಯಮಿ ಶ್ರೀಶೈಲ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಈ ಪ್ರಕರಣದಲ್ಲಿ ಉದ್ದೇಶಿತ ಭೂಮಿಯು ಪುರಸಭೆ ವ್ಯಾಪ್ತಿಯಲ್ಲಿದ್ದು ಈ ಭೂಮಿಗೆ ಕರ್ನಾಟಕ ಭೂ ಕಂದಾಯ ಕಾಯ್ದೆಯ ನಿಯಮಗಳು ಅನ್ವಯವಾಗುವುದಿಲ್ಲ. ಆದ್ದರಿಂದ, ಮುಂದಿನ 60 ದಿನಗಳಲ್ಲಿ ಅರ್ಜಿದಾರರ ಆಸ್ತಿಗೆ ಸಂಬಂಧಿಸಿದಂತೆ ನಿಯಮಗಳ ಅನುಸಾರ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ನೀಡಿ‘ ಎಂದು ಪುರಸಭೆಗೆ ನಿರ್ದೇಶಿಸಿದೆ.

ಪ್ರಕರಣವೇನು?: ಅರ್ಜಿದಾರರು ಪಿತ್ರಾರ್ಜಿತ ಆಸ್ತಿಯಲ್ಲಿ 1.29 ಎಕರೆ ಜಮೀನಿನ ವಾರಸುದಾರರು. ಈ ಜಮೀನನ್ನು ಅವರು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಪರಿಗಣಿಸಿದ್ದ ಜಿಲ್ಲಾಧಿಕಾರಿ ಕೃಷಿಯೇತರ ಚಟುವಟಿಕೆಗಳ ಬಳಕೆ ಅನುಮತಿ ನೀಡಿದ್ದರು.

ಅರ್ಜಿದಾರರು ಈ ಪರಿವರ್ತಿತ ಜಮೀನಿನಲ್ಲಿ 14,436 ಚದರಡಿಯಲ್ಲಿ ಪೆಟ್ರೋಲ್ ಬಂಕ್ ನಿರ್ಮಿಸಿದ್ದರು. ಇನ್ನುಳಿದ ಜಮೀನನ್ನು ವಾಣಿಜ್ಯ ಕಟ್ಟಡದ ನಿರ್ಮಾಣಕ್ಕಾಗಿ ಪ್ರಸ್ತಾವ ಸಲ್ಲಿಸಿದ್ದರು. ಆದರೆ, ಬೈಲಹೊಂಗಲ ಪುರಸಭೆ ವಾಣಿಜ್ಯ ಕಟ್ಟಡಗಳಿಗೆ ನಕ್ಷೆ ಮಂಜೂರು ಮಾಡುವಂತೆ ಕೋರಿದ್ದ ಈ ಮನವಿಯನ್ನು 2022ರ ಅಕ್ಟೋಬರ್ 13ರಂದು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಶ್ರೀಶೈಲ ಹೈಕೋರ್ಟ್ ಮೆಟ್ಟಿಲೇರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.