ಬೆಂಗಳೂರು: ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಕೇಳಿಬರುತ್ತಿದ್ದಂತೆ ಸಿದ್ದರಾಮಯ್ಯ ಬಣ ಎಚ್ಚೆತ್ತುಕೊಂಡಿದೆ ಎಂದು ಬಿಜೆಪಿ ಹೇಳಿದೆ.

ಈ ಕುರಿತು ಸೋಮವಾರ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, 'ಸದನದಲ್ಲಿ ಸಿಡಿ ವಿಚಾರದ ಬಗ್ಗೆ ಚರ್ಚಿಸುವಾಗ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪವಾಗಿರಲಿಲ್ಲ. ಹೀಗಾಗಿ, ಸದನದಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ರೋಷಾವೇಶ ಪ್ರದರ್ಶಿಸಿದರು. ಈಗ ಷಡ್ಯಂತ್ರದಲ್ಲಿ ಡಿಕೆಶಿ ಹೆಸರು ಕೇಳಿ ಬರುತ್ತಿದೆ. ಆ ಕಾರಣ ಡಿಕೆಶಿ ಮೌನವಾಗಿದ್ದಾರೆ. ಸಿದ್ದರಾಮಯ್ಯ ಮತ್ತೆ ಮತ್ತೆ ಸಿಡಿ ವಿಚಾರವನ್ನು ಕೆದಕುತ್ತಿದ್ದಾರೆ' ಎಂದು ತಿಳಿಸಿದೆ.

ಇದನ್ನೂ ಓದಿ-ಸಿಡಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಜಾರಕಿಹೊಳಿಗೆ ಕೋವಿಡ್ ದೃಢ ಎಂದ ಭೈರತಿ

'ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಹೆಸರು ತಳುಕು ಹಾಕಿಕೊಳ್ಳುತ್ತಲೇ ಸಿದ್ದರಾಮಯ್ಯ ಬಣ ಎಚ್ಚೆತ್ತುಕೊಂಡಿದೆ. ಸಿಎಂ ಆಗುವ ಕನಸಿಗೆ ತೊಡಕಾಗಿರುವ ಡಿಕೆಶಿ ಅವರನ್ನು ಮಣಿಸಲು ಸಿದ್ದರಾಮಯ್ಯ ಅವರಿಗೆ ಇದೊಂದು ಸದಾವಕಾಶ. ಈ ಪ್ರಕರಣದಲ್ಲಿ ಡಿಕೆಶಿ ಅವರನ್ನು ಸಿಲುಕಿಸಲು ಶ್ರಮಿಸುತ್ತಿರುವ ಸಿದ್ದರಾಮಯ್ಯಗೆ ಶುಭವಾಗಲಿ' ಎಂದು ಬಿಜೆಪಿ ಟ್ವೀಟಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.